ಬೆಳಗ್ಗಿನ ಉಪಹಾರಕ್ಕೆ ಮಾಡಿ ಆರೋಗ್ಯಕರ ಓಟ್ಸ್ ಮಸಾಲ..

Public TV
2 Min Read
OATS MASALA 2

ಯೆಟ್ ಮಾಡುವವರು, ಸಣ್ಣ ಆಗಲು ಬಯಸುವವರು ಓಟ್ಸ್ ತಿನ್ನುವುದನ್ನು ನೋಡಿಯೇ ಇರುತ್ತೀರಿ. ಓಟ್ಸ್ ತಿನ್ನುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದರಿಂದ ಯಾವುದೇ ದುಷ್ಪರಿಣಾಮಗಳಿಲ್ಲ. ದಿನಾ ಒಂದೇ ರೀತಿಯಾಗಿ ಓಟ್ಸ್ ತಿನ್ನುವ ಬದಲು ಸ್ವಲ್ಪ ಡಿಫರೆಂಟ್ ಆಗಿ ಮಾಡಿ ತಿಂದರೆ ಚೆನ್ನಾಗಿರುತ್ತದೆ ಅಲ್ವಾ. ಹಾಗಿದ್ರೆ ಇವತ್ತಿನ ನಮ್ಮ ರೆಸಿಪಿಯಯಲ್ಲಿ ಓಟ್ಸ್ ಮಸಾಲ ಹೇಗೆ ಮಾಡಬಹುದು ಎಂಬುದನ್ನು ತಿಳಿಸಿಕೊಡುತ್ತೇವೆ. ಇದನ್ನೂ ಓದಿ: ಟ್ರಾವೆಲ್ ಮಾಡೋವಾಗ ಯಾವಾಗ್ಲೂ ಇಟ್ಟುಕೊಂಡಿರಿ ಚಾಕ್ಲೇಟ್ ಕಾಫಿ ಎನರ್ಜಿ ಬೈಟ್ಸ್

OATS MASALA 1

ಬೇಕಾಗುವ ಸಾಮಗ್ರಿಗಳು:
ಓಟ್ಸ್ – 1 ಕಪ್
ಹೆಚ್ಚಿದ ಈರುಳ್ಳಿ – 1
ಹೆಚ್ಚಿದ ಟೊಮೆಟೊ – 1
ಹೆಚ್ಚಿದ ಕ್ಯಾರೆಟ್ – 2 ಚಮಚ
ಹಸಿ ಮೆಣಸಿನಕಾಯಿ – 2
ಬಟಾಣಿ – 2 ಚಮಚ
ಗರಂ ಮಸಾಲ – ಅರ್ಧ ಚಮಚ
ಅಚ್ಚ ಖಾರದ ಪುಡಿ – ಅಗತ್ಯಕ್ಕೆ ತಕ್ಕಷ್ಟು
ಅರಶಿಣ ಪುಡಿ – 1 ಚಮಚ
ಉಪ್ಪು – ರುಚಿಗೆ ತಕ್ಕಷ್ಟು

oats masala

ಮಾಡುವ ವಿಧಾನ:

  • ಮೊದಲಿಗೆ ಒಂದು ಬಾಣಲೆಗೆ ಓಟ್ಸ್ ಹಾಕಿಕೊಂಡು ಗರಿ ಗರಿಯಾಗುವವರೆಗೂ ಹುರಿದುಕೊಳ್ಳಿ. ನಂತರ ಅದನ್ನು ಪಕ್ಕಕ್ಕೆ ಇಡಿ.
  • ನಂತರ ಒಂದು ಪ್ಯಾನ್‌ಗೆ ಒಂದು ಚಮಚ ತುಪ್ಪ ಹಾಕಿಕೊಂಡು ಬಿಸಿಯಾದ ಬಳಿಕ ಅದಕ್ಕೆ ಸ್ವಲ್ಪ ಜೀರಿಗೆ ಹಾಕಿಕೊಳ್ಳಿ. ಜೀರಿಗೆ ಕೆಂಪಾದ ಬಳಿಕ ಅದಕ್ಕೆ 1 ಚಮಚ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿಕೊಂಡು ಅದರ ಹಸಿ ವಾಸನೆ ಹೋಗುವವರೆಗೂ ಫ್ರೈ ಮಾಡಿಕೊಳ್ಳಿ.
  • ಈಗ ಇದಕ್ಕೆ ಹೆಚ್ಚಿದ ಈರುಳ್ಳಿಯನ್ನು ಹಾಕಿಕೊಂಡು ಚನ್ನಾಗಿ ಫ್ರೈ ಮಾಡಿಕೊಳ್ಳಬೇಕು. ಬಳಿಕ ಇದಕ್ಕೆ ಹೆಚ್ಚಿದ ತರಕಾರಿಗಳನ್ನು ಹಾಕಿಕೊಂಡು, ಬಟಾಣಿಯನ್ನು ಹಾಕಿಕೊಂಡು ಹುರಿದುಕೊಳ್ಳಿ.
  • ನಂತರ ಈ ಮಿಶ್ರಣಕ್ಕೆ ಅಚ್ಚ ಖಾರದ ಪುಡಿ, ಅರಶಿಣ ಪುಡಿ, ಗರಂ ಮಸಾಲ ಹಾಕಿಕೊಳ್ಳಿ. ಅಲ್ಲದೇ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿಕೊಂಡು ಚನ್ನಾಗಿ ಫ್ರೈ ಮಾಡಿಕೊಳ್ಳಬೇಕು.
  • ಈಗ ಇದಕ್ಕೆ ಎಷ್ಟು ಬೇಕೋ ಅಷ್ಟು ನೀರನ್ನು ಹಾಕಿಕೊಂಡು ಅದಕ್ಕೆ ಹುರಿದಿಟ್ಟಿದ್ದ ಓಟ್ಸ್ ಅನ್ನು ಹಾಕಿಕೊಳ್ಳಿ. ಬಳಿಕ ಇದನ್ನು 5ರಿಂದ 6 ನಿಮಿಷಗಳ ಕಾಲ ಬೇಯಲು ಬಿಡಿ. ನಂತರ ಇದನ್ನು ಸರ್ವಿಂಗ್ ಪ್ಲೇಟ್‌ಗೆ ಹಾಕಿಕೊಂಡು ಬಿಸಿ ಬಿಸಿಯಾಗಿ ತಿನ್ನಿ. ಇದನ್ನೂ ಓದಿ: ಫ್ರೀ ಟೈಮ್‌ನಲ್ಲಿ ಬೇಕೆನಿಸುತ್ತೆ ಚಟ್‌ಪಟಾ ಆಲೂ ಚಾಟ್

Share This Article