Dakshina KannadaDistrictsKarnatakaLatestMain Post

ಮೋದಿ ಕಾರ್ಯಕ್ರಮ, ಕಟೀಲ್‌ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ – 2 ಕೇಸ್‌ ದಾಖಲು

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗೊಂದಲ ಉಂಟು ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಕೇಸ್‌ ದಾಖಲಾಗಿದೆ.

ದಕ್ಷಿಣ ಕನ್ನಡದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುವ ಸಂದರ್ಭದಲ್ಲಿ ಆಕ್ಷೇಪಾರ್ಹ ರೀತಿ ಫೋಟೋ ಎಡಿಟ್‌ ಮಾಡಿದ್ದಕ್ಕೆ ಎರಡು ಪ್ರಕರಣಗಳನ್ನು ಮಂಗಳೂರು ಪೊಲೀಸರು ದಾಖಲಿಸಿದ್ದಾರೆ.  ಇದನ್ನೂ ಓದಿ: ಅಲ್‌ಖೈದಾ ಸಂಪರ್ಕ – ಅಸ್ಸಾಂನ 3ನೇ ಮದರಸಾ ನೆಲಸಮ

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌, ಸಾಮಾಜಿಕ ಜಾಲತಾಣವನ್ನು ಮಂಗಳೂರು ಸಿಟಿ ಸೈಬರ್ ಪೊಲೀಸರು ಗಮನಿಸುತ್ತಿದ್ದಾರೆ. ಫೋಟೋವನ್ನು ಮಾರ್ಕ್ ಮಾಡಿ ಆಕ್ಷೇಪಾರ್ಹ ರೀತಿ ಚಿತ್ರಿಸಿ ಕಾರ್ಯಕ್ರಮದಲ್ಲಿ ಗೊಂದಲ ಉಂಟು ಮಾಡುವ ರೀತಿ ಪೋಸ್ಟ್ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಗೊಂದಲ ನಿರ್ಮಾಣ ಮಾಡಲೆಂದು ವಾಟ್ಸಪ್ ಗ್ರೂಪ್ ಮಾಡಲಾಗಿದೆ. ಈ ಪೋಸ್ಟ್ ಅಪರಾಧ ಎಂದು ಗೊತ್ತಾದರೆ ಪ್ರಕರಣ ದಾಖಲು ಮಾಡುತ್ತೇವೆ. ಇಲ್ಲದಿದ್ದಲ್ಲಿ ಅವರಿಂದ ಶ್ಯೂರಿಟಿ ಬಾಂಡ್ ಪಡೆಯಲಿದ್ದೇವೆ. ಈಗಾಗಲೇ ಎರಡು ಪ್ರಕರಣ ದಾಖಲಿಸಿದ್ದೇವೆ. ಪೋಸ್ಟ್ ಮಾಡಿದವರನ್ನು ವಶಕ್ಕೆ ಪಡೆಯುತ್ತೇವೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ. ಕಾರ್ಯಕ್ರಮದಲ್ಲಿ ಗೊಂದಲ ನಿರ್ಮಾಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

Live Tv

Leave a Reply

Your email address will not be published.

Back to top button