ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

Public TV
2 Min Read
Actress Ramya

– ನಿಮ್ಮ ನಿಲುವು ಸರಿಯಿದೆ ಎಂದ ಶಿವಣ್ಣ ದಂಪತಿ

ರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರಕ್ಕಿಳಿದಿರುವ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ (Actress Ramya) ದೊಡ್ಮನೆ ಕುಟುಂಬ ಸಾಥ್ ನೀಡಿದೆ.

ನಟ ಶಿವರಾಜ್‌ಕುಮಾರ್ (Shivarajkumar) ಹಾಗೂ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಇದು ಸರಿಯಲ್ಲ ಎಂದು ಪರೋಕ್ಷವಾಗಿ ಡಿ-ಬಾಸ್ ಅಭಿಮಾನಿಗಳ ವಿರುದ್ಧ ಸಿಡಿದೆದ್ದಿದ್ದಾರೆ.ಇದನ್ನೂ ಓದಿ: ಬೆಳಗಾವಿ | ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ. ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ರಮ್ಯಾ ನಿಮ್ಮ ನಿಲುವು ಸರಿಯಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದು ಬೆಂಬಲ ಸೂಚಿಸಿದ್ದಾರೆ.

ಶಿವಣ್ಣನ ಪೋಸ್ಟ್ ಬೆನ್ನಲ್ಲೇ ನಟ ಯುವ ರಾಜ್‌ಕುಮಾರ್ (Yuva Rajkumar) ಕೂಡ ಅದೇ ಪೋಸ್ಟ್‌ನ್ನು ರೀ-ಪೋಸ್ಟ್ ಮಾಡುವ ಮೂಲಕ ರಮ್ಯಾ ಪರ ನಿಂತಿದ್ದಾರೆ. ಇನ್ನೂ ಸೋಮವಾರ (ಜು.28) ನಟ ವಿನಯ್ ರಾಜ್‌ಕುಮಾರ್ (Vinay Rajkumar) ಅವರು ಸೋಶಿಯಲ್ ಮೀಡಿಯಾದಲ್ಲಿ ರಮ್ಯಾ ಪರ ಬರೆದುಕೊಂಡಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣರಾಗುತ್ತಿದ್ದಾರೆ. ಜೊತೆಗೆ ಡಿ-ಬಾಸ್ ಅಭಿಮಾನಿಗಳು ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಕೂಡ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆಗಿದ್ದಾರೆ. ಜೊತೆಗೆ ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ಅಕೌಂಟ್‌ಗಳನ್ನು ಬಹಿರಂಗಗೊಳಿಸಿದ್ದು, ಸದ್ಯ 43 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: 56 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಖದೀಮರು ಅರೆಸ್ಟ್

Share This Article