ಡಿ-ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ದೂರಿನ ಬಳಿಕವೂ ನಿಲ್ಲದ ಕಾಮೆಂಟ್ಸ್

Public TV
1 Min Read
ramya 5

ಡಿ-ಫ್ಯಾನ್ಸ್‌ನಿಂದ (D-Boss) ಬರುತ್ತಿರುವ ಅಶ್ಲೀಲ ಮೆಸೇಜ್ ವಿಚಾರವಾಗಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ (Actress Ramya) ಈಗಾಗಲೇ ಕಾನೂನು ಸಮರಕ್ಕಿಳಿದಿದ್ದಾರೆ. ಆದರೂ ಕೂಡ ಅಶ್ಲೀಲ ಮೆಸೇಜ್‌ಗಳು ನಿಲ್ಲುತ್ತಿಲ್ಲ.

ಇನ್‌ಸ್ಟಾಗ್ರಾಂ ಮೂಲಕ ಅಶ್ಲೀಲ ಮೆಸೇಜ್ ಬಂದ ಹಿನ್ನೆಲೆ ನಟಿ ರಮ್ಯಾಗೆ ಈಗಾಗಲೇ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ಇಷ್ಟೆಲ್ಲಾ ಆದರೂ ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್‌ಗಳು ಮುಂದುವರಿದಿವೆ.ಇದನ್ನೂ ಓದಿ: ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

ದೂರು ದಾಖಲಾದ 43 ಅಕೌಂಟ್‌ಗಳ ಪೈಕಿ ಒಂದು ಅಕೌಂಟ್ `ದಿ-ಡೆವಿಲ್-ಲವ್-181′ ನಿಂದ ಪದೇ ಪದೇ ಅಶ್ಲೀಲ ಸ್ಟೇಟಸ್ ಹಾಗೂ ಮೆಸೇಜ್‌ಗಳು ಬರುತ್ತಲೇ ಇವೆ. ಇನ್ನೊಂದು ಕಡೆ ಡಿ-ಬಾಸ್ ಅಭಿಮಾನಿಗಳು ಸ್ವಲ್ಪ ದಿನ ಸುಮ್ನಿರೋಣ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಇನ್ನೂ ಎಫ್‌ಐಆರ್ ದಾಖಲಾಗಿ ಎರಡು ದಿನ ಕಳೆದರೂ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ.

ರೇಣುಕಾಸ್ವಾಮಿ ಕೊಲೆ (Renukaswamy Case) ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣರಾಗುತ್ತಿದ್ದಾರೆ. ಜೊತೆಗೆ ಡಿ-ಬಾಸ್ ಅಭಿಮಾನಿಗಳು ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಕೂಡ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆಗಿದ್ದಾರೆ. ಜೊತೆಗೆ ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ಅಕೌಂಟ್‌ಗಳನ್ನು ಬಹಿರಂಗಗೊಳಿಸಿ, ದೂರು ದಾಖಲಿಸಿದ್ದರು.ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

Share This Article