ಬೆಂಗಳೂರು: ನಟಿ ರಮ್ಯಾಗೆ (Actress Ramya) ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಓಬಣ್ಣ ಹಾಗೂ ಗಂಗಾಧರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೋಲಾರ (Kolar) , ಚಿತ್ರದುರ್ಗ (Chitradurga) ಮೂಲದವರು ಎಂದು ತಿಳಿದು ಬಂದಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದವ್ರಿಗೆ ಶಿಕ್ಷೆ ಆಗ್ಬೇಕು: ರಾಕ್‍ಲೈನ್ ವೆಂಕಟೇಶ್
ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‍ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ ವೇಳೆ ಮತ್ತೆ ಐದು ಅಕೌಂಟ್‍ಗಳನ್ನು ಸೇರಿಸಿ 48 ಅಕೌಂಟ್‍ಗಳ ಮೇಲೆ ದೂರು ದಾಖಲಿಸಿದ್ದರು. ಎಫ್‍ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್‍ಗಳು ಡಿಲಿಟ್ ಆಗಿದ್ದವು. ಅಷ್ಟರಲ್ಲಿ ಪೊಲೀಸರು ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ಅಡ್ರೆಸ್‍ಗಳು ಅಕೌಂಟ್ ಡಿಟೇಲ್ಸ್ ಕೊಡುವಂತೆ ಮನವಿ ಮಾಡಿದ್ದರು.
ಪೊಲೀಸರ ಮನವಿಯಂತೆ ಸಂಬಂಧಪಟ್ಟ ಸಂಸ್ಥೆಗಳು ಡಿಲಿಟ್ ಆಗಿದ್ದ ಅಕೌಂಟ್‍ಗಳ ಎಲ್ಲಾ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿವೆ. ಈ ಅಶ್ಲೀಲ ಕಮೆಂಟ್ ಹಾಕಿ, ಅಕೌಂಟ್ ಡಿಲಿಟ್ ಮಾಡಿ ಆರಾಮಾಗಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 40 ಮಂದಿಯ ಚಹರೆ ಗುರುತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ – ತಪ್ಪಿತಸ್ಥರಿಗೆ 5 ವರ್ಷ ಜೈಲು, ದಂಡ: ಸೈಬರ್ ತಜ್ಞರ ಮಾಹಿತಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ್ದ ಅನಿಸಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಪೋಸ್ಟ್ ಮಾಡಿದ್ದರು. ಇದಕ್ಕೆ ಕೆಲವು ಕಿಡಿಗೇಡಿಗಳು ಅಶ್ಲೀಲ ಸಂದೇಶ ಹಾಗೂ ಕಮೆಂಟ್ ಹಾಕಿದ್ದರು.