ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮೇಲೆ ಅಶ್ಲೀಲ ವೀಡಿಯೋ ಹಂಚಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ದಾಖಲಾಗಿತ್ತು. ತಮಗೆ ನಿರೀಕ್ಷಣಾ ಜಾಮೀನು ಸಿಗುವತನಕ ಮುಖಮುಚ್ಚಿಕೊಂಡೇ ಓಡಾಡುವುದಾಗಿ ಶಪಥ ಮಾಡಿದ್ದರು. ಕೊನೆಗೂ ಇಂದು ಸುಪ್ರೀಂ ಕೋರ್ಟ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕೇವಲ ರಾಜ್ ಕುಂದ್ರಾಗೆ ಮಾತ್ರವಲ್ಲ, ನಟಿಯರಾದ ಶೆರ್ಲಿನಾ ಚೋಪ್ರಾ ಮತ್ತು ಪೂನಂ ಪಾಂಡೆಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Advertisement
ನಿರೀಕ್ಷಾ ಜಾಮೀನು ಮಂಜೂರು ಮಾಡಿರುವ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಕೆ.ಎಂ. ಜೋಸೆಫ್ ಅವರಿದ್ದ ಪೀಠ ಆರೋಪಿಗಳು ತನಿಖೆಗೆ ಸಹಕರಿಸುವಂತೆ ಸೂಚಿಸಿದೆ. ಕುಂದ್ರಾ ಪರ ವಕೀಲರು ‘ಈಗಾಗಲೇ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳು ತನಿಖೆಗೂ ಸಹಕರಿಸುತ್ತಿದ್ದಾರೆ. ಹಾಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕುಂದ್ರಾ ಪರ ವಕೀಲರು ಮನವಿ ಮಾಡಿದ್ದರು. ಅವರ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ. ಇದನ್ನೂ ಓದಿ: `ಕಾಂತಾರ’ ನೋಡಿ ತುಂಬಾ ಕಲಿತೆ: ರಿಷಬ್ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ
Advertisement
Advertisement
ಅಶ್ಲೀಲ ವಿಡಿಯೋ ಹಂಚಿಕೆ ಕುರಿತಂತೆ ಭಾರತೀಯ ದಂಡ ಸಂಹಿತೆ, ಮಹಿಳೆಯರ ಅಸಭ್ಯ ಪ್ರಾತಿನಿಧ್ಯ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನದ ಕಾಯ್ದೆಯ ಅಡಿಯಲ್ಲಿ ಕುಂದ್ರಾ ಮತ್ತು ಇತರ ನಟಿಯರ ಮೇಲೆ ಎಫ್.ಐ.ಆರ್ ದಾಖಲಾಗಿತ್ತು. ಈ ಹಿಂದೆಯೇ ಕುಂದ್ರಾಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈಗ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ಬಿಗ್ ರಿಲೀಫ್ ನೀಡಿದೆ.