– 10, 12 ತರಗತಿ ಹೊರತುಪಡಿಸಿ ಎಲ್ಲರಿಗೂ ರಜೆ
ನವದೆಹಲಿ: ಮಾಲಿನ್ಯದ ಪ್ರಮಾಣ ಹೆಚ್ಚುತ್ತಿರುವುದರಿಂದ ದೆಹಲಿಯಲ್ಲಿ (Delhi) ನ.13 ರಿಂದ ನ.20 ರವರೆಗೆ ಸಮ-ಬೆಸ ಸಂಖ್ಯೆಯ ಕಾರು ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ (Delhi) ಪರಿಸರ ಸಚಿವ ಗೋಪಾಲ್ ರೈ (Environment Minister Gopal Rai) ಘೋಷಿಸಿದ್ದಾರೆ.
Advertisement
ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಬೆಸ-ಸಮ ಯೋಜನೆಯ ವಾಹನಗಳ ನಂಬರ್ ಪ್ಲೇಟ್‍ನ ಕೊನೆಯ ಅಂಕಿಗಳ ಆಧಾರದ ಮೇಲೆ ಈ ಯೋಜನೆ ಜಾರಿ ಮಾಡಲಾಗುತ್ತದೆ. ಇದರ ಅಡಿಯಲ್ಲಿ ಬೆಸ ಅಂಕಿಗಳಲ್ಲಿ (1,3,5,7 ಮತ್ತು 9) ಕೊನೆಗೊಳ್ಳುವ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಬೆಸ ದಿನಾಂಕಗಳಲ್ಲಿ (0,2,4,6 ಮತ್ತು 8) ಸಮ ಸಂಖ್ಯೆಗಳನ್ನು ಹೊಂದಿರುವ ವಾಹನಗಳು ಸಮ ದಿನಾಂಕಗಳಲ್ಲಿ ರಸ್ತೆಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಸ್ವಾಮೀಜಿ ನಕ್ಸಲೈಟ್ ಆಗ್ಬೇಕಿತ್ತು, ದುರ್ದೈವ ಖಾವಿ ಹಾಕಿದ್ದಾರೆ: ಯತ್ನಾಳ್ ಕಿಡಿ
Advertisement
Advertisement
ಈ ಮೊದಲು 6 ರಿಂದ 12ನೇ ತರಗತಿಗಳಿಗೆ ಆನ್‍ಲೈನ್‍ಗೆ ತರಗತಿ ಆಯ್ಕೆಯನ್ನು ನೀಡಲಾಗಿತ್ತು. ಈಗ 10 ಮತ್ತು 12 ಹೊರತುಪಡಿಸಿ ಎಲ್ಲಾ ವರ್ಗಗಳ ಶಾಲೆಗಳು ನವೆಂಬರ್ 10 ರವರೆಗೆ ರಜೆ ನೀಡಲು ಆದೇಶಿಸಲಾಗಿದೆ. ದೆಹಲಿಯಲ್ಲಿ ಬಿಎಸ್ 3 ಪೆಟ್ರೋಲ್ ಮತ್ತು ಬಿಎಸ್ 4 ಡೀಸೆಲ್ ಕಾರುಗಳ ಮೇಲಿನ ನಿಷೇಧವು ಮುಂದುವರಿಯುತ್ತದೆ. ನಗರದಲ್ಲಿ ಯಾವುದೇ ನಿರ್ಮಾಣ ಸಂಬಂಧಿತ ಕೆಲಸಗಳು ನಡೆಯುವುದಿಲ್ಲ ಎಂದಿದ್ದಾರೆ.
Advertisement
ಮಾಲಿನ್ಯ ನಿಯಂತ್ರಣಕ್ಕೆ ನಾಲ್ಕು ಹಂತಗಳಲ್ಲಿ ಕ್ರಮಗಳನ್ನು ಯೋಜಿಸಿದೆ. ನಾಲ್ಕನೇ ಹಂತವೂ ಗಾಳಿಯ ಗುಣಮಟ್ಟ ಸೂಚ್ಯಂಕ 450 ಮೀರುವ ಮುನ್ನ ಈ ನಿಯಮವನ್ನು ಅನುಷ್ಠಾನಗೊಳಿಸಬೇಕು. ಈವರೆಗೂ ಇದು ಸಮರ್ಪಕವಾಗಿ ಜಾರಿಯಾಗಿಲ್ಲ. ನಾಲ್ಕನೇ ಹಂತವೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳ 50% ರಷ್ಟು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಶಿಫಾರಸು ಮಾಡಲಾಗಿದೆ. ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದವುಗಳನ್ನು ಹೊರತುಪಡಿಸಿ ದೆಹಲಿಗೆ ಟ್ರಕ್ ಪ್ರವೇಶದ ಮೇಲೆ ಸಂಪೂರ್ಣ ನಿಷೇಧವಿದೆ ಎಂದು ಅವರು ತಿಳಿಸಿದ್ದಾರೆ.
ಕಾಲೇಜ್‍ಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದು, ಬೆಸ-ಸಮ ನಿಯಮದಂತಹ ಹೆಚ್ಚುವರಿ ತುರ್ತು ಕ್ರಮಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಲಾಗಿದೆ. ದೆಹಲಿಯ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆಯಿಂದ ತೀವ್ರ ಕಳಪೆ ಮಟ್ಟಕ್ಕೆ ತಿರುಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಸೋಮವಾರ ಬೆಳಗ್ಗೆ ಗಾಳಿಯ ಗುಣಪಟ್ಟದ ಸೂಚ್ಯಂಕದಲ್ಲಿ (AQI) 437ನ್ನು ದಾಖಲಿಸಿದೆ. ಇದನ್ನೂ ಓದಿ: ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಘೋಷಣೆ