ಮುಂಬೈ: ಬಹು ನಿರೀಕ್ಷಿತ 2023 ಏಷ್ಯಾಕಪ್ (AsiaCup 2023) ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಭಾರತ ಮತ್ತು ಪಾಕಿಸ್ತಾನ (Ind vs Pak) ತಂಡಗಳು 15 ದಿನಗಳ ಅಂತರದಲ್ಲಿ ಮೂರು ಬಾರಿ ಮುಖಾಮುಖಿಯಾಗಲಿವೆ.
ಕಳೆದ ವರ್ಷ ಟಿ20 ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್ ಟೂರ್ನಿ ಬಳಿಕ ಮತ್ತೆ ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿಯಲು ದಿನಾಂಕ ಫಿಕ್ಸ್ ಆಗಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಲಂಕಾ ಕ್ರಿಕೆಟ್ ಕ್ರೀಡಾಂಗಣ ಸಜ್ಜಾಗಿದೆ.
Advertisement
Advertisement
ಉಭಯ ತಂಡಗಳ ಕ್ರಿಕೆಟ್ ಪ್ರಿಯರು ಇಂಡೋ-ಪಾಕ್ ರೋಚಕ ಕದನಕ್ಕಾಗಿ ಕಾದು ಕುಳಿತಿದ್ದಾರೆ. ಗೆಲುವಿಗಾಗಿ ಇತ್ತಂಡಗಳು ಭಾರೀ ಕಸರತ್ತನ್ನೇ ನಡೆಸಿದ್ದು, ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 2 ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ಇತ್ತಂಡಗಳು ಮುಖಾಮುಖಿಯಾಗಲಿವೆ. ಇದನ್ನೂ ಓದಿ: PublicTV Explainer: ಇಂಡೋ-ಪಾಕ್ ಕದನ ಯಾಕಿಷ್ಟು ರಣರೋಚಕ – ನೀವು ತಿಳಿಯಲೇಬೇಕಾದ ಸಂಗತಿಗಳಿವು..
Advertisement
Advertisement
ಭಾರತ, ಪಾಕಿಸ್ತಾನ ತಂಡಗಳು ಏಷ್ಯಾಕಪ್ ಟೂರ್ನಿಯ `ಎ’ ಗುಂಪಿನಲ್ಲಿ ನೇಪಾಳ ತಂಡದೊಂದಿಗೆ ಸ್ಥಾನ ಪಡೆದಿದ್ದು, ಲೀಗ್ ಹಂತದಲ್ಲಿ ಮೊದಲ ಬಾರಿ ಮುಖಾಮುಖಿಯಾಗಲಿವೆ. ಇದಾದ ಬಳಿಕ ಸೂಪರ್-4 ಹಂತದಲ್ಲಿ ಮತ್ತೊಮ್ಮೆ ಎದುರಾಗಲಿದೆ. ಸತತ ಹೋರಾಟಗಳಿಂದ ಭಾರತ ಮತ್ತು ಪಾಕಿಸ್ತಾನ ಫೈನಲ್ ಪ್ರವೇಶಿಸಿದರೆ ಮತ್ತೊಮ್ಮೆ ತೀವ್ರ ಹಣಾಹಣಿ ನಡೆಸಲಿದ್ದು, ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಇದನ್ನೂ ಓದಿ: ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್
ಈ ಬಾರಿ ಪಾಕಿಸ್ತಾನ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಏಷ್ಯಾಕಪ್ ಟೂರ್ನಿ ನಡೆಯುತ್ತಿದ್ದು, ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಒಟ್ಟು 13 ಪಂದ್ಯಗಳು ನಡೆಯಲಿವೆ. `ಎ’ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ನೇಪಾಳ ತಂಡಗಳಿದ್ದು, ‘ಬಿ’ ಗುಂಪಿನಲ್ಲಿ ಬಾಂಗ್ಲಾದೇಶ, ಅಫ್ಘಾನಿಸ್ತಾನ, ಶ್ರೀಲಂಕಾ ತಂಡಗಳು ಸ್ಥಾನ ಪಡೆದಿವೆ. ಪಾಕಿಸ್ತಾನದ ಲಾಹೋರ್ ಮತ್ತು ಮುಲ್ತಾನ್ ಕ್ರೀಡಾಂಗಣಗಳಲ್ಲಿ 4 ಪಂದ್ಯಗಳು ಮಾತ್ರ ನಡೆಯಲಿದ್ದು, ಉಳಿದ 9 ಪಂದ್ಯಗಳು ಲಂಕಾದ ಕ್ಯಾಂಡಿ ಮತ್ತು ಕೊಲಂಬೋದಲ್ಲಿ ನಡೆಯಲಿದೆ. ಸೆಪ್ಟೆಂಬರ್ 17ರಂದು ಕೊಲಂಬೋ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
Web Stories