ಅಹಮದಾಬಾದ್: ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎನಿಸಿಕೊಂಡಿರುವ ರೋಹಿತ್ ಶರ್ಮಾ (Rohit Sharma) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಕದಿನ ವಿಶ್ವಕಪ್ 2023ರ (ODI World Cup 2023) ಪಾಕ್ (Pakistan) ವಿರುದ್ಧದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನದ ಬಳಿಕ ಅಂಪೈರ್ ಎದುರು ತಮ್ಮ ಸಿಕ್ಸರ್ ಹಿಂದಿನ ಶಕ್ತಿಯ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.
ರೋಹಿತ್ ಶರ್ಮಾ ಸಿಕ್ಸರ್ ಬಾರಿಸುವುದನ್ನು ಕಂಡು ಅಂಪೈರ್ ಮರೈಸ್ ಎರಾಸ್ಮಸ್ ಆಶ್ಚರ್ಯ ಪಟ್ಟಿದ್ದಾರೆ. ಮೈದಾನದಲ್ಲಿ ರೋಹಿತ್ ಬಳಿ ಅಷ್ಟು ಅಬ್ಬರದಲ್ಲಿ ಸಿಕ್ಸರ್ ಬಾರಿಸಿದ್ದೀರಿ, ಬ್ಯಾಟ್‍ನಲ್ಲಿ ಏನಾದರೂ ವಿಶೇಷ ಶಕ್ತಿ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ರೋಹಿತ್ ತಮ್ಮ ತೋಳನ್ನು ತೋರಿಸಿ ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ: 69 ರನ್‌ಗಳ ಭರ್ಜರಿ ಜಯ – ಇಂಗ್ಲೆಂಡ್ ಶಾಕ್, ಅಫ್ಘಾನ್ ರಾಕ್
Advertisement
Advertisement
ಪಂದ್ಯದ ಬಳಿಕ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಬಳಿ ಬಂದು ಸಂದರ್ಶಕರಂತೆ ವಿಚಾರಿಸಿದ್ದಾರೆ. ಆಗ ರೋಹಿತ್ ಅಂಪೈರ್ ಹೇಳಿದ ಮಾತನ್ನು ಹೇಳಿ, ಬ್ಯಾಟ್‍ನಲ್ಲಿ ಅಲ್ಲ, ನನ್ನ ತೋಳಿನಲ್ಲಿದೆ ಎಂದು ಹೇಳಿದ್ದಾರೆ.
Advertisement
Advertisement
ಈ ಬಾರಿಯ ವಿಶ್ವಕಪ್‍ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಮೊಹಮ್ಮದ್ ರಿಜ್ವಾನ್ (248 ರನ್) ಮತ್ತು ಡೆವೊನ್ ಕಾನ್ವೇ (229 ರನ್) ಗಳಿಸಿದ್ದರೆ ರೋಹಿತ್ ಶರ್ಮಾ 217 ರನ್ ಗಳಿಸಿದ್ದಾರೆ.
ಸಿಕ್ಸರ್‌ನಲ್ಲಿ ರೋಹಿತ್ ಶರ್ಮಾ ಮತ್ತೊಂದು ದಾಖಲೆ ಬರೆದಿದ್ದಾರೆ. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕ್ರಿಸ್ ಗೇಲ್ ದಾಖಲೆ ಮುರಿದು ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಏಕದಿನ ಮಾದರಿಯಲ್ಲಿ 300 ಸಿಕ್ಸರ್ ಸಿಡಿಸಿದ್ದಾರೆ.
ಏಕದಿನ ಮಾದರಿಯಲ್ಲಿ ಶಾಹಿನ್ ಅಫ್ರಿದಿ 351 ಸಿಕ್ಸರ್ ಸಿಡಿಸಿ ಮೊದಲನೇ ಸ್ಥಾನದಲ್ಲಿದ್ದಾರೆ. ಕ್ರಿಸ್ ಗೇಲ್ 331 ಸಿಕ್ಸರ್ ಸಿಡಿಸಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 303 ಸಿಕ್ಸರ್ ಸಿಡಿಸಿದ್ದು ಮೂರನೇ ಸ್ಥಾನದಲ್ಲಿದ್ದಾರೆ. ಏಕದಿನ ಮಾದರಿಯಲ್ಲಿ 300 ಸಿಕ್ಸರ್ ಬಾರಿಸಿದ ಏಕೈಕ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆ ಅವರದ್ದಾಗಿದೆ.
ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ 6 ಬೌಂಡರಿ 6 ಭರ್ಜರಿ ಸಿಕ್ಸರ್ ಸಹಿತ 86 ರನ್ ಗಳಿಸಿದ ರೋಹಿತ್ ಶರ್ಮಾ ಭಾರತ ಸುಲಭ ಜಯ ಸಾಧಿಸಲು ನೆರವಾದರು. ಇದನ್ನೂ ಓದಿ: ಹೈವೋಲ್ಟೇಜ್ ಪಂದ್ಯದ ಬಳಿಕ ಪಾಕ್ ನಾಯಕನಿಗೆ ಜೆರ್ಸಿ ಗಿಫ್ಟ್ ಮಾಡಿದ ಕೊಹ್ಲಿ: ವಾಸಿಂ ಅಕ್ರಮ್ ಗರಂ
Web Stories