– ಬಿಸಿಸಿಐ ಕರಡು ವೇಳಾಪಟ್ಟಿ ಪ್ರಕಟ
ಮುಂಬೈ: ಅಕ್ಟೋಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ (ODI World Cup) ಟೂರ್ನಿಗೆ BCCI ಸಿದ್ಧಪಡಿಸಿದ ಕರಡು ವೇಳಾಪಟ್ಟಿಯನ್ನು ICCಯೊಂದಿಗೆ ಹಂಚಿಕೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸೆಣಸಲಿವೆ.
Advertisement
ಟಿ20 ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್ ಟೂರ್ನಿಗಳ ಬಳಿಕ ಮತ್ತೊಮ್ಮೆ ಭಾರತ-ಪಾಕಿಸ್ತಾನದ (Ind vs Pak) ರಣರೋಚಕ ಪಂದ್ಯವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಹಾತೊರೆಯುತ್ತಿದ್ದಾರೆ. ಇದನ್ನೂ ಓದಿ: ಇಷ್ಟಕ್ಕೆ ಮುಗಿದಿಲ್ಲ – ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಗಿಲ್ ಖಡಕ್ ರಿಯಾಕ್ಷನ್
Advertisement
Advertisement
ಬಿಸಿಸಿಐ ಕರಡು ವೇಳಾಪಟ್ಟಿ ಪ್ರಕಾರ, ಅಕ್ಟೋಬರ್ 8ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಅಕ್ಟೋಬರ್ 15 ರಂದು ಪಾಕ್ ವಿರುದ್ಧ ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಕಣಕ್ಕಿಳಿದು ಅಬ್ಬರಿಸಲಿದೆ. ಮುಂದಿನ ವಾರದಲ್ಲೇ ಅಂತಿಮ ವೇಳಾಪಟ್ಟಿ ಪ್ರಕಟವಾಗಲಿದ್ದು, ಅದಕ್ಕೂ ಮುನ್ನ ಭಾಗವಹಿಸುವ ದೇಶಗಳಿಗೆ ಪ್ರತಿಕ್ರಿಯೆಗಾಗಿ ಕಳುಹಿಸಲಾಗಿದೆ.
Advertisement
ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಟೂರ್ನಿ (ODI World Cup 2023) ಆರಂಭವಾಗಲಿದ್ದು, ಅಹಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ಹಾಗೂ ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದ ನ್ಯೂಜಿಲೆಂಡ್ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ನವೆಂಬರ್ 19ರಂದು ಫೈನಲ್ ಪಂದ್ಯಕ್ಕೂ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಆದರೆ ನವೆಂಬರ್ 15 ಮತ್ತು 16 ರಂದು ನಡೆಯಲಿರುವ ಸೆಮಿಫೈನಲ್ ಪಂದ್ಯಗಳ ಸ್ಥಳಗಳನ್ನೂ ಇನ್ನೂ ನಿರ್ಧರಿಸಲಾಗಿಲ್ಲ.
ಕೊನೆಯದ್ದಾಗಿ 2011ರಲ್ಲಿ ಸ್ವದೇಶದಲ್ಲಿ ವಿಶ್ವಕಪ್ ಗೆದ್ದ ಅತಿಥೇಯ ಭಾರತ ಕೋಲ್ಕತ್ತಾ, ಮುಂಬೈ, ದೆಹಲಿ ಹಾಗೂ ಬೆಂಗಳೂರು ಸೇರಿದಂತೆ 9 ನಗರಗಳಲ್ಲಿ ಲೀಗ್ ಹಂತದ ಪಂದ್ಯಗಳನ್ನ ಆಡಲಿದೆ. ಪಾಕಿಸ್ತಾನ ಭಾರತದ 5 ನಗರಗಳಲ್ಲಿ ಲೀಗ್ ಪಂದ್ಯಗಳನ್ನಾಡಲಿದೆ. ಈ ನಡುವೆ ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮೋದಿ ಅಂಗಳದಲ್ಲಿ ಮುಖಾಮುಖಿಯಾಗಲಿವೆ. ಇದನ್ನೂ ಓದಿ: WTC: ಭಾರತಕ್ಕೆ ಹೀನಾಯ ಸೋಲು – 209 ರನ್‌ಗಳ ಭರ್ಜರಿ ಜಯ, ಆಸೀಸ್‌ಗೆ ಚೊಚ್ಚಲ ಟ್ರೋಫಿ
ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಈ ಪೈಕಿ 8 ತಂಡಗಳನ್ನು ಈಗಾಗಲೇ ನಿರ್ಧರಿಸಲಾಗಿದ್ದು, ಇನ್ನೆರಡು ತಂಡಗಳು ಅರ್ಹತಾ ಸುತ್ತಿನ ಮೂಲಕ ಮುಖ್ಯ ಟೂರ್ನಿಗೆ ಅರ್ಹತೆ ಪಡೆಯಲಿವೆ.
ಯಾವ ಸ್ಥಳದಲ್ಲಿ ಆಯೋಜನೆ?
ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕ್ರಿಕೆಟ್‌ಗೆ ಬಿಸಿಸಿಐ 12 ಕ್ರೀಡಾಂಗಣವನ್ನು ಅಂತಿಮಗೊಳಿಸಿದೆ. ಅದರಂತೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ, ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈನಲ್ಲಿ ಪಂದ್ಯ ನಡೆಯಲಿದೆ.
ಟೀಂ ಇಂಡಿಯಾದ ತಾತ್ಕಾಲಿಕ ವೇಳಾಪಟ್ಟಿ:
ಅಕ್ಟೋಬರ್ 8: ಭಾರತ Vs ಆಸ್ಟ್ರೇಲಿಯಾ – ಸ್ಥಳ: ಚೆನ್ನೈ
ಅಕ್ಟೋಬರ್ 11: ಭಾರತ Vs ಅಫ್ಘಾನಿಸ್ತಾನ – ಸ್ಥಳ: ನವದೆಹಲಿ
ಅಕ್ಟೋಬರ್ 15: ಭಾರತ Vs ಪಾಕಿಸ್ತಾನ – ಸ್ಥಳ: ಅಹಮದಾಬಾದ್
ಅಕ್ಟೋಬರ್ 19: ಭಾರತ Vs ಬಾಂಗ್ಲಾದೇಶ – ಸ್ಥಳ: ಪುಣೆ
ಅಕ್ಟೋಬರ್ 22: ಭಾರತ Vs ನ್ಯೂಜಿಲೆಂಡ್ – ಸ್ಥಳ: ಧರ್ಮಶಾಲಾ
ಅಕ್ಟೋಬರ್ 29: ಭಾರತ Vs ಇಂಗ್ಲೆಂಡ್ – ಸ್ಥಳ: ಲಕ್ನೋ
ನವೆಂಬರ್ 2: ಭಾರತ Vs ಕ್ವಾಲಿಫೈಯರ್ – ಸ್ಥಳ: ಮುಂಬೈ
ನವೆಂಬರ್ 5: ಭಾರತ Vs ದಕ್ಷಿಣ ಆಫ್ರಿಕಾ – ಸ್ಥಳ: ಕೋಲ್ಕತ್ತಾ
ನಂವೆಬರ್ 11: ಭಾರತ Vs ಕ್ವಾಲಿಫೈಯರ್ – ಸ್ಥಳ: ಬೆಂಗಳೂರು