ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತದಿಂದಾಗಿ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಆವರಿಸುವ ಭೀತಿ ಶುರುವಾಗಿದೆ.
Advertisement
ಮುಂದಿನ 24 ಗಂಟೆಗಳಲ್ಲಿ ಅಂದರೆ ಡಿಸೆಂಬರ್ 4ರಂದು ಜವಾದ್ ಚಂಡಮಾರುತ ಆಂಧ್ರಪ್ರದೇಶ ಮತ್ತ ಒಡಿಶಾಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ. ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು- ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯನ ಬರ್ಬರ ಕೊಲೆ
Advertisement
Pre-cyclone watch for north Andhra Pradesh – Odisha coasts- A Depression has formed over southeast BOB at 1730 hrs IST of 02nd Dec. It is likely to intensify into a cyclonic storm during the next 24 hrs.
— India Meteorological Department (@Indiametdept) December 2, 2021
Advertisement
ಡಿ.4ರ ವೇಳೆಗೆ ಚಂಡಮಾರುತವು 90 ರಿಂದ 100 ಕಿ.ಮೀ. ವೇಗದಲ್ಲಿ ಒಡಿಶಾ ಕರಾವಳಿಗೆ ಅಪ್ಪಳಿಸಲಿದ್ದು, ಚಂಡಮಾರುತದಿಂದಾಗಿ ಕರಾವಳಿ ಆಂಧ್ರಪ್ರದೇಶ, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ (8) 32 ತಂಡಗಳನ್ನು ನಿಯೋಜಿಸಿದೆ. ಭಾರತೀಯ ಸೇನೆ ಮತ್ತು ನೌಕಾಪಡೆಯ ತಂಡಗಳು ತಮ್ಮ ಹಡಗುಗಳು ಮತ್ತು ವಿಮಾನಗಳನ್ನು ಸಿದ್ಧಪಡಿಸಿದ್ದಾರೆ.
Advertisement
The Depression, lay centered at 2330 hrs IST of 2nd Dec 2021, over BoB near Lat 12.0°N & Long 87.5°E, about 770 km south-southeast of Vishakhapatnam (Andhra Pradesh), likely to move northwestwards and intensify into a Cyclonic Storm during next 24 hours. pic.twitter.com/cgEjeOeZEj
— India Meteorological Department (@Indiametdept) December 2, 2021
ಜವಾದ್ ಚಂಡಮಾರುತ ಬಂಗಾಳಕೊಲ್ಲಿಯಲ್ಲಿರುವ ಕೆಲವು ಪ್ರದೇಶಗಳ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಒಡಿಶಾ ಸರ್ಕಾರ ಗುರುವಾರ ಸಂಜೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಒಡಿಶಾ ಸರ್ಕಾರವು ಎನ್‍ಡಿಆರ್‍ಎಫ್, ರಾಜ್ಯ ಅಗ್ನಿಶಾಮಕ ದಳ ಮತ್ತು ಒಡಿಶಾ ಡಿಸಾಸ್ಟರ್ ರ್ಯಾಪಿಡ್ ಆಕ್ಷನ್ ಫೋರ್ಸ್ (ಒಡಿಆರ್‌ಎಫ್) ಸೇರಿದಂತೆ 266 ತಂಡಗಳನ್ನು ಕರಾವಳಿ ಜಿಲ್ಲೆಗಳಲ್ಲಿ ಯೋಜಿಸಿದೆ. ಜವಾದ್ ಚಂಡಮಾರುತದ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರವು ಸನ್ನದ್ಧವಾಗಿದೆ, 14 ಕರಾವಳಿ ಜಿಲ್ಲೆಗಳನ್ನು ಅಲರ್ಟ್ ಘೋಷಿಸಲಾಗಿದೆ ಮತ್ತು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿಶೇಷ ಪರಿಹಾರ ಆಯುಕ್ತ (ಎಸ್‌ಆರ್‌ಸಿ) ಪ್ರದೀಪ್ ಕುಮಾರ್ ಜೆನಾ ತಿಳಿಸಿದ್ದಾರೆ. ಇದನ್ನೂ ಓದಿ: ಕೆ.ಆರ್.ಎಸ್ ಹಿನ್ನೀರಿಗೆ ಬಿದ್ದು ಪ್ರೇಮಿಗಳು ಆತ್ಮಹತ್ಯೆ
ದೇಶದಲ್ಲಿ ಚಂಡಮಾರುತ ಸಂಬಂಧಿತ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಹತ್ವದ ಸಭೆ ನಡೆಸಿದರು. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಲಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದ್ದು, ಒಡಿಶಾ ರಾಜ್ಯಕ್ಕೆ ರೆಡ್ ಅಲರ್ಡ್ ಘೋಷಿಸಲಾಗಿದೆ. ಆಂಧ್ರಪ್ರದೇಶಕ್ಕೂ ಎಚ್ಚರಿಕೆ ನೀಡಲಾಗಿದೆ.