ಭುವನೇಶ್ವರ್: ಶನಿವಾರ ಒಡಿಶಾದ ಎಲ್ಲಾ 20 ಸಚಿವರು ರಾಜೀನಾಮೆ ನೀಡಿದ್ದರು. ಇದಾದ ಒಂದು ದಿನದ ಬಳಿಕ ಹೊಸ ಸಂಪುಟ ಪುನಾರಚನೆ ಆಗಿದ್ದು, ನೂತನ 13 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ನಿರ್ದೇಶನದಂತೆ ರಾಜ್ಯ ಸರ್ಕಾರದ ಎಲ್ಲಾ 20 ಸಚಿವರು ಶನಿವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಒಡಿಶಾದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಸಚಿವರು ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ.
Advertisement
Advertisement
ಭುವನೇಶ್ವರದ ಲೋಕಸೇವಾ ಭವನದ ನೂತನ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಡಿ ಶಾಸಕರಾದ ಜಗನ್ನಾಥ್ ಸರಕಾ, ನಿರಂಜನ್ ಪೂಜಾರಿ ಮತ್ತು ಆರ್.ಪಿ ಸ್ವೈನ್ ಸೇರಿದಂತೆ 13 ಶಾಸಕರಿಗೆ ರಾಜ್ಯಪಾಲ ಗಣೇಶಿ ಲಾಲ್ ಅವರು ಪ್ರಮಾಣ ವಚನ ಬೋಧಿಸಿದರು. ಮೂವರು ಮಹಿಳಾ ಶಾಸಕರಾದ ಪ್ರಮೀಳಾ ಮಲ್ಲಿಕ್, ಉಷಾದೇವಿ ಮತ್ತು ತುಕುನಿ ಸಾಹು ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರಿಸಲಾಗಿದೆ. ಇದನ್ನೂ ಓದಿ: ವಿಶ್ವಪರಿಸರ ದಿನ- ರಾಜಭವನದಲ್ಲಿ ರುದ್ರಾಕ್ಷಿ ಸಸಿ ನೆಟ್ಟ ರಾಜ್ಯಪಾಲರು
Advertisement
Odisha | In a cabinet reshuffle, swearing-in ceremony of 21 ministers- 13 cabinet & 8 ministers with independent charge underway at Convention Centre in Lok Seva Bhawan, Bhubaneswar in the presence of CM Naveen Patnaik pic.twitter.com/ininLcU3wA
— ANI (@ANI) June 5, 2022
ಒಡಿಶಾ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಸ್.ಎನ್ ಪಾತ್ರೋ: ಒಡಿಶಾ ಅಸೆಂಬ್ಲಿ ಸ್ಪೀಕರ್ ಎಸ್.ಎನ್ ಪಾತ್ರೋ ಅವರು ಶನಿವಾರ ರಾಜೀನಾಮೆ ನೀಡಿದ್ದರು. ಈ ಬಗ್ಗೆ ಪಾತ್ರೋ ಅವರ ಮಗ ಬಿಪ್ಲಬ್ ಮಾತನಾಡಿ, ನನ್ನ ತಂದೆ ಗಂಭೀರ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ ಮತ್ತು ಅವರ ಎಡಗಣ್ಣಿನಲ್ಲಿ ಸೋಂಕಿನಿಂದ ಬಳಲುತ್ತಿದ್ದಾರೆ. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ
Advertisement
ಈ ಹಿನ್ನೆಲೆಯಲ್ಲಿ ಬಿ.ಕೆ ಅರುಖಾ ಮುಂದಿನ ಒಡಿಶಾ ಸ್ಪೀಕರ್ ಆಗುವ ಸಾಧ್ಯತೆಯಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ.ಕೆ ಅರುಖಾ ಅವರು ವಿಧಾನಸಭೆಯ ಮುಂದಿನ ಸ್ಪೀಕರ್ ಆಗುವ ಸಾಧ್ಯತೆ ಇದೆ ಎಂದು ಆಡಳಿತಾರೂಢ ಬಿಜೆಡಿ ಮೂಲಗಳು ತಿಳಿಸಿವೆ.