ಭುವನೇಶ್ವರ್: ವ್ಯಕ್ತಿಯೊಬ್ಬ ತನ್ನ ತಾಯಿಯನ್ನೇ ಮರದ ಹಲಗೆಯಿಂದ ಹತ್ಯೆಗೈದ ಅಮಾನವೀಯ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ.
ಜಿತೇಂದ್ರ ಕನ್ಹರ್(30) ಬಂಧಿತ ಆರೋಪಿ. ಒಡಿಶಾದ ಕಂಧಮಾಲ್ ಜಿಲ್ಲೆಯ ಫುಲ್ಬಾನಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ. ಈತ 61 ವರ್ಷದ ತಾಯಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ. ಫುಲ್ಬಾನಿ ಪಟ್ಟಣದ ಹೊರವಲಯದಲ್ಲಿರುವ ತಮ್ಮ ಮನೆಯಲ್ಲಿ ಬೆಳಗ್ಗೆ ಜಗಳವಾಡಿದ ನಂತರ ಕೋಪ ಗೊಂಡಿದ್ದ. ಈ ಕೋಪ ಮಿತಿಮೀರಿದ್ದು, ತಾಯಿಯನ್ನು ಜಿತೇಂದ್ರ ಮರದ ಹಲಗೆಯಿಂದ ಹೊಡೆದಿದ್ದಾನೆ.
ಸ್ಥಳೀಯರು ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದರು. ಮೃತಪಟ್ಟ ವಿಷಯವನ್ನು ವೈದ್ಯರು ಸ್ಪಷ್ಟಪಡಿಸಿದ್ದಾರೆ ಎಂದು ಫುಲ್ಬಾನಿ ಉಪವಿಭಾಗದ ಪೊಲೀಸ್ ಅಧಿಕಾರಿ ಮಹೇಂದ್ರ ಮುರ್ಮು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳು ಓಡಿ ಹೋಗದಂತೆ ತಡೆಯಲು ಕಾಲಿಗೆ ಕಬ್ಬಿಣ ಸರಪಳಿ ಕಟ್ಟಿದ ಮೌಲಾನಾ
ಘಟನೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಜಿತೇಂದ್ರ ಕನ್ಹರ್‍ನನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಹೊರಗುತ್ತಿಗೆ ನೀಡುವ ನಿರ್ಧಾರ ಖಂಡಿಸಿ ಇಂದಿನಿಂದ ಮಹಾರಾಷ್ಟ್ರ ನರ್ಸ್‍ಗಳಿಂದ ಮುಷ್ಕರ