ನವದೆಹಲಿ: ಒಡಿಶಾದಲ್ಲಿ ನಡೆದ ಭೀಕರ ರೈಲ್ವೆ ಅಪಘಾತದ (Odisha Train Tragedy) ಬಳಿಕ ಕೈಗಾರಿಕೋದ್ಯಮಿ ಗೌತಮ್ ಅದಾನಿ (Gautam Adani) ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 270ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ರೈಲ್ವೆ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ (Adani Group) ವಹಿಸಿಕೊಳ್ಳುತ್ತದೆ ಎಂದು ಗೌತಮ್ ಅದಾನಿ ಭಾನುವಾರ ಘೋಷಿಸಿದ್ದಾರೆ.
ಒಡಿಶಾ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರವಾಗಿ ಆಘಾತಕ್ಕೊಳಗಾಗಿದ್ದೇವೆ. ಈ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಅಮಾಯಕ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಸಮೂಹ ವಹಿಸಿಕೊಳ್ಳಲು ನಾವು ನಿರ್ಧರಿಸಿದ್ದೇವೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ಒದಗಿಸುವುದು ಮತ್ತು ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಬಿಲಿಯನೇರ್ ಗೌತಮ್ ಅದಾನಿ ತಿಳಿಸಿದ್ದಾರೆ.
Advertisement
Advertisement
ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಲ್ಲಿಯವರೆಗೆ 275 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 88 ಶವಗಳನ್ನು ಗುರುತಿಸಲಾಗಿದೆ. ಉಳಿದ ಮೃತದೇಹಗಳ ಪೈಕಿ 170 ಶವಗಳನ್ನು ಭುವನೇಶ್ವರದ ಶವಾಗಾರ ಹಾಗೂ ಇತರ ಆಸ್ಪತ್ರೆಗಳಾದ ಏಮ್ಸ್, ಕ್ಯಾಪಿಟಲ್, ಎಸ್‌ಯುಎಂ, ಕೆಐಎಂ ಹಾಗೂ ಎಎಂಆರ್‌ಐ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ವೇಳೆ ಕವಚ್ ಅಳವಡಿಸಿದ್ದರೂ ಈ ದುರಂತವನ್ನು ತಪ್ಪಿಸಲು ಆಗುತ್ತಿರಲಿಲ್ಲ- ಅಪಘಾತಕ್ಕೆ ಕಾರಣ ತಿಳಿಸಿದ ರೈಲ್ವೇ
Advertisement
Advertisement
ಒಟ್ಟಾರೆಯಾಗಿ 1,175 ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಬೆಳಗಿನ ಜಾವದವರೆಗೆ 793 ಗಾಯಾಳುಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್