ಭುವನೇಶ್ವರ: ಒಡಿಶಾ (Odisha Train Tragedy) ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ (Naveen Patnaik), ಕೋಲ್ಕತ್ತಾಗೆ (Kolkata) ಉಚಿತ ಬಸ್ ಸೇವೆ ಒದಗಿಸಲಾಗಿದೆ ಎಂದು ಘೋಷಿಸಿದ್ದಾರೆ.
Advertisement
Advertisement
ಪ್ರಯಾಣಿಕರ ಹೆಚ್ಚಿನ ಪ್ರಯೋಜನವನ್ನು ಗಮನದಲ್ಲಿಟ್ಟುಕೊಂಡು ಸಿಎಂ ಪಟ್ನಾಯಕ್, ಇಂದಿನಿಂದ ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
Advertisement
ಪ್ರತಿದಿನ ಸುಮಾರು 50 ಬಸ್ಸುಗಳು ಕೋಲ್ಕತ್ತಾ ಮತ್ತು ಒಡಿಶಾದ ನಡುವಿನ ಮೂರು ನಗರಗಳಲ್ಲಿ ಸಂಚಾರ ನಡೆಸಲಿವೆ. ಇದಕ್ಕೆ ತಗಲುವ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗುವುದು. ಬಾಲಸೋರ್ ಮಾರ್ಗದಲ್ಲಿ ಸಾಮಾನ್ಯ ರೈಲು ಸೇವೆಯನ್ನು ಮರುಸ್ಥಾಪಿಸುವವರೆಗೆ ಈ ವ್ಯವಸ್ಥೆ ಮುಂದುವರಿಯುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Advertisement
ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಅಪಘಾತದಿಂದಾಗಿ ಈವರೆಗೆ 270 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 1,000 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಮುಖ್ಯಮಂತ್ರಿ ಪಟ್ನಾಯಕ್ ಅವರು, ರಾಜ್ಯದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ರೈಲು ಡಿಕ್ಕಿಯಾದ ಶಬ್ದಕ್ಕೆ ಹೆದರಿ ಬಿಗಿಯಾಗಿ ಕಿಟಕಿ ಸರಳುಗಳನ್ನು ಹಿಡಿದು ಬಚಾವಾದೆ – ದುರಂತದಲ್ಲಿ ಬದುಕುಳಿದವನ ಮಾತು