ಒಡಿಶಾ ರೈಲು ದುರಂತ- ರಶ್ಮಿಕಾ ಮಂದಣ್ಣ ಸಂತಾಪ

Public TV
1 Min Read
rashmika mandanna

320 X 50

ಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರೈಲು ದುರಂತದ ಬಗ್ಗೆ ಇದೀಗ ‘ಪುಷ್ಪ’ (Pushpa) ನಟಿ ರಶ್ಮಿಕಾ ಮಂದಣ್ಣ (Rashmika Mandanna) ರಿಯಾಕ್ಟ್ ಮಾಡಿದ್ದಾರೆ. ಅಪಘಾತದಲ್ಲಿ 240ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಅವರ ನಿಧನದ ಬಗ್ಗೆ ರಶ್ಮಿಕಾ ಸಂತಾಪ ಸೂಚಿಸಿದ್ದಾರೆ.

Balasore Train Accident 2

ಚೆನ್ನೈ-ಕೊರೊಮಂಡೆಲ್ ಎಕ್ಸ್ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.

RASHMIKA MANDANNA 1

ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ (Odisha Train Tragedy) ಯಶವಂತಪುರ ಪ್ಯಾಸೆಂಜರ್ ರೈಲು ಹಾಗೂ ಸರಕು ಸಾಗಾಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಇದನ್ನೂ ಓದಿ:ಒಡಿಶಾದಲ್ಲಿ ಭೀಕರ ರೈಲು ದುರಂತ: ಯಶ್, ಸುಮಲತಾ ಸೇರಿದಂತೆ ಹಲವರ ಸಂತಾಪ

ಇದೀಗ ರಶ್ಮಿಕಾ ಮಂದಣ್ಣ ಸಹ ಈ ಕುರಿತು ಟ್ವೀಟ್ ಮಾಡಿದ್ದು, ಒಡಿಶಾ ರೈಲು ದುರಂತದ ಸುದ್ದಿ ತಿಳಿದು ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ನಿಧನ ಹೊಂದಿದವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದೇನೆ ಎಂದು ನಟಿ ಬರೆದುಕೊಂಡಿದ್ದಾರೆ.

Share This Article