ನವದೆಹಲಿ: ಕಳೆದ ತಿಂಗಳು ಜೂನ್ ಆರಂಭದಲ್ಲಿ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತಕ್ಕೆ (Odisha Train Tragedy) ಸಿಗ್ನಲ್ ದೋಷವೇ ಕಾರಣ ಎಂದು ರೈಲ್ವೆ ಸಚಿವಾಲಯ ರಾಜ್ಯಸಭೆಯಲ್ಲಿ ವರದಿಯನ್ನು ಮೊದಲ ಬಾರಿಗೆ ಬಹಿರಂಗಪಡಿಸಿದೆ.
ರಾಜ್ಯಸಭೆಯಲ್ಲಿ ಸಂಸದ ಡಾ. ಜಾನ್ ಬಿಟ್ರಾಸ್ ಅವರು ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತ್ರಿವಳಿ ರೈಲು ಅಪಘಾತ ಸಿಗ್ನಲ್ ಸರ್ಕ್ಯೂಟ್ ಆಲ್ಟರೇಶನ್‌ನಲ್ಲಿ ತಪ್ಪಾಗಿದ್ದರಿಂದ ಸಂಭವಿಸಿದೆ. ಇದರಿಂದ ಸಿಗ್ನಲ್ ತಪ್ಪಾಗಿ ಪ್ರದರ್ಶನವಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ನಿಲ್ದಾಣದ ನಾರ್ತ್ ಸಿಗ್ನಲ್ ಗೂಮ್ಟಿಯಲ್ಲಿ ಸಿಗ್ನಲಿಂಗ್ ಸರ್ಕ್ಯೂಟ್ ಮಾರ್ಪಾಡು ಹಾಗೂ ನಿಲ್ದಾಣದ ಲೆವೆಲ್ ಕ್ರಾಸಿಂಗ್ ಗೇಟ್ ನಂ.94ಕ್ಕೆ ಎಲೆಕ್ಟ್ರಿಕ್ ಲಿಫ್ಟಿಂಗ್ ಬ್ಯಾರಿಯರ್ ಬದಲಾಯಿಸುವುದಕ್ಕೆ ಸಂಬಂಧಿಸಿದಂತೆ ಸಿಗ್ನಲಿಂಗ್ ಕಾರ್ಯದ ವೇಳೆ ಸಿಗ್ನಲಿಂಗ್-ಸರ್ಕ್ಯೂಟ್ ಬದಲಾವಣೆಯಲ್ಲಿನ ಲೋಪಗಳಿಂದ ರೈಲುಗಳು ಡಿಕ್ಕಿಯಾಗಿವೆ ಎಂದು ಉತ್ತರಿಸಿದ್ದಾರೆ.
ಈ ದೋಷಗಳ ಪರಿಣಾಮವಾಗಿ ರಾಂಗ್ ಲೈನ್‌ಗೆ ಹಸಿರು ಸಿಗ್ನಲ್ ಪ್ರದರ್ಶಿಸಲಾಯಿತು. ಇದು ನಿಂತಿದ್ದ ಸರಕು ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿಯಾಗಲು ಕಾರಣವಾಯಿತು. ಈ ತಪ್ಪುಗಳು ರೈಲ್ವೆ ಅಧಿಕಾರಿಗಳ ಲೋಪ ಹಾಗೂ ನಿರ್ಲಕ್ಷ್ಯದಿಂದ ಸಂಭವಿಸಿರುವುದು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದಾರೆ. ಮಾತ್ರವಲ್ಲದೆ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರ ಪೈಕಿ 41 ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಸರ್ಕಾರ ಬಹಿರಂಗಪಡಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ
ಕಳೆದ ತಿಂಗಳು ಜೂನ್ 2ರಂದು ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 293 ಜನರು ಸಾವನ್ನಪ್ಪಿದ್ದಾರೆ. 1,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತ ಕಳೆದ 3 ದಶಕಗಳಲ್ಲೇ ಭಾರತದಲ್ಲಿ ಸಂಭವಿಸಿದ ಅತ್ಯಂತ ಭೀಕರ ರೈಲು ದುರಂತವಾಗಿದೆ.
ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಕೇಂದ್ರೀಯ ತನಿಖಾ ದಳ ಮೂವರು ಭಾರತೀಯ ರೈಲ್ವೆ ಉದ್ಯೋಗಿಳಾದ ಅರುಣ್ ಕುಮಾರ್ ಮಹಂತ, ಮೊಹಮ್ಮದ್ ಅಮೀರ್ ಖಾನ್ ಹಾಗೂ ಪಪ್ಪು ಕುಮಾರ್‌ರನ್ನು ಬಂಧಿಸಿದೆ. ಇದನ್ನೂ ಓದಿ: ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್-ಬಿಜೆಪಿ ಹೊಂದಾಣಿಕೆ: ಕಾಲೆಳೆದ ಕಾಂಗ್ರೆಸ್
Web Stories