ಭುವನೇಶ್ವರ್: ಊಟದಲ್ಲಿ ಇರುವೆ ಇದೆ ಎಂದು ರೇಗಿದ್ದಕ್ಕೆ ಪತಿಯನ್ನು ಕತ್ತು ಹಿಸುಕಿ ಪತ್ನಿ ಕೊಂದಿರುವ ಘಟನೆ ಒಡಿಶಾದ ಸುಂದರ್‌ಗಢ್ ಜಿಲ್ಲೆಯಲ್ಲಿ ನಡೆದಿದೆ.
ಹೇಮಂತ ಬಾಗ್ (35) ಪತ್ನಿಯಿಂದ ಹತ್ಯೆಯಾದ ವ್ಯಕ್ತಿ. ಕೊಲೆ ಮಾಡಿದ ಆತನ ಪತ್ನಿ ಸರಿತಾಳನ್ನು ಪೊಲೀಸರು ಬಂಧಿಸಿದ್ದಾರೆ. ಈಕೆಯ ಮಾವ ಶಶಿ ಭೂಷಣ್ ಬಾಗ್ ನೀಡಿದ ದೂರಿನ ಮೇರೆಗೆ ಪೊಲೀಸರು ಸರಿತಾಳನ್ನು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಸಂಬಳ ಕೇಳಿದ ದಲಿತ ವ್ಯಕ್ತಿಯನ್ನು ಥಳಿಸಿ, ಮೂತ್ರ ಕುಡಿಯುವಂತೆ ಒತ್ತಾಯಿಸಿ ವಿಕೃತಿ
ಹೇಮಂತ ಊಟ ಮಾಡುವಾಗ ಅನ್ನದಲ್ಲಿ ಇರುವೆ ಸಿಕ್ಕಿದೆ. ಊಟದಲ್ಲಿ ಇರುವೆ ಇದೆ ಎಂದು ಆತ ಪತ್ನಿ ಮೇಲೆ ರೇಗಾಡಿದ್ದಾನೆ. ಪತಿ, ಪತ್ನಿ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಸರಿತಾ ಕತ್ತು ಹಿಸುಕಿ ಕೊಂದಿದ್ದಾಳೆ.
ಹೇಮಂತ ಬಾಗ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಪತ್ನಿ ಸರಿತಾ, ಪುತ್ರಿ ಹೇಮಲತಾ, ಪುತ್ರ ಸೌಮ್ಯ ಜೊತೆ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಬಕಾರಿ ಹಗರಣ – ಸಿಬಿಐ ಸಲ್ಲಿಸಿದ ಚಾರ್ಜ್‍ಶೀಟ್‍ನಲ್ಲಿ ಮನೀಶ್ ಸಿಸೋಡಿಯಾ ಹೆಸರಿಲ್ಲ