ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ ಅಂದರ್

Public TV
1 Min Read
Kolar BRIBE ARREST

320 X 50

ಕೋಲಾರ: ಲಂಚ ಪಡೆಯುವ ವೇಳೆ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಪ್ರಕರಣ ಕೋಲಾರದಲ್ಲಿ ನಡೆದಿದೆ.

ಅಧಿಕಾರಿ ರಾಜೇಂದ್ರನ್, ಸುಬಾನಾಯಕ್ ಎಂಬವರಿಗೆ ಬೆಂಗಳೂರಿನ ಮೆಟ್ರೋದಲ್ಲಿ (Bangalore Metro) ಕೆಲಸಕ್ಕೆ ನಿಯೋಜಿಸಲು ಲಂಚದ ಬೇಡಿಕೆ ಇಟ್ಟಿದ್ದ. ಸುಬಾನಾಯಕ್ 6000 ರೂ. ಲಂಚ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಅಧಿಕಾರಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಯಾರಾದ್ರೂ ಲಂಚ ಕೇಳಿದ್ರೆ ನೇರವಾಗಿ ನನಗೆ ಪತ್ರ ಬರೆಯಿರಿ, ಒದ್ದು ಒಳಗೆ ಹಾಕಿಸ್ತೀನಿ: ಡಿಕೆಶಿ

ಕೋಲಾರ (Kolar) ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಆರೋಪಿ ರಾಜೇಂದ್ರನ್ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೈಲ್ವೇ ಟ್ರ್ಯಾಕ್ ಮೇಲೆ ಟೈರ್ ಇಟ್ಟ ದುಷ್ಕರ್ಮಿಗಳು – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Share This Article