ಡಾರ್ಜಿಲಿಂಗ್: ಗೂರ್ಖಾ ಜನಮುಕ್ತಿ ಮೋರ್ಚಾ ಪ್ರತಿಭಟನಾಕಾರರು ಪ್ರತ್ಯೇಕ ಗೂರ್ಖಾ ಲ್ಯಾಂಡ್ ರಾಜ್ಯಕ್ಕಾಗಿ ಡಾರ್ಜಿಲಿಂಗ್‍ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶನಿವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾರತೀಯ ಮೀಸಲು ಬಟಾಲಿಯನ್(ಐಆರ್‍ಬಿ) ಸಹಾಯಕ ಕಮಾಂಡೆಂಟ್ ಅವರನ್ನು ಹತ್ಯೆ ಮಾಡಲಾಗಿದೆ.
ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಯನ್ನು ಹತ್ತಿಕ್ಕುವ ಯತ್ನ ಮುಂದುವರಿದಿದ್ದು, ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಿದ್ದರಿಂದ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡಿದೆ.
Advertisement
ಭದ್ರತಾ ಸಿಬ್ಬಂದಿ ಮತ್ತು ಗೂರ್ಖಾ ಜನ ಮುಕ್ತಿ ಮೋರ್ಚಾ(ಜಿಜೆಎಂ)ದೊಂದಿಗೆ ನಡೆದ ಘರ್ಷಣೆಯಲ್ಲಿ ಐಆರ್‍ಬಿ ಸಹಾಯಕ ಕಮಾಂಡೆಂಟ್ ಕಿರಣ್ ತಮಂಗ್ ಅವರು ಗಂಭೀವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Advertisement
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಜೆಎಂ ಇಬ್ಬರು ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಗೂರ್ಖಾ ಜನ ಮುಕ್ತಿ ಮೋರ್ಚಾದ ಸಹಾಯಕ ಪ್ರಧಾನ ಕಾರ್ಯದರ್ಶಿ ಬಿನಯ್ ತಮಂಗ್ ಹೇಳಿದ್ದಾರೆ.
Advertisement
ಪ್ರಸ್ತುತ ಡಾರ್ಜಿಲಿಂಗ್‍ನಲ್ಲಿ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ್ದು, ಜಿಜೆಎಂ ಕಾರ್ಯಕರ್ತರು ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ ಹಾಗೂ ಕಲ್ಲುಗಳನ್ನು ಎಸೆಯುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಟೀಯರ್ ಗ್ಯಾಸ್ ಹಾಗೂ ಲಾಠಿ ಚಾರ್ಜ್ ನಡೆಸುತ್ತಿದ್ದಾರೆ.
Advertisement
ಜಿಜೆಎಂ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದು, ಸಿಂಗ್ಮರಿ ಪ್ರದೇಶದಲ್ಲಿ ಸೇನೆ ನಿಯೋಜಿಸಲಾಗಿದೆ.
#Darjeeling: 1 policeman injured and a police vehicle burnt by protesters as GJM's protests over 'Gorkhaland' continue. pic.twitter.com/6oZEstZODP
— ANI (@ANI) June 17, 2017
Security forces use rubber bullets as protests demanding separate state of Gorkhaland continue in West Bengal's #Darjeeling pic.twitter.com/5emeglJF0d
— ANI (@ANI) June 17, 2017