DistrictsKalaburagiKarnatakaLatestMain Post

ಅಧಿಕಾರಿಗಳ ಕಿರುಕುಳ – ಸಾರಿಗೆ ನೌಕರ ಆತ್ಮಹತ್ಯೆ

ಯಾದಗಿರಿ: ನೇಣು ಬಿಗಿದುಕೊಂಡು ಸಾರಿಗೆ ನೌಕರನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಕಾಶಿನಾಥ್ (46) ಆತ್ಮಹತ್ಯೆ ಮಾಡಿಕೊಂಡಿರುವ ನೌಕರ. ಕಾಶಿನಾಥ್ ಮೂಲತಃ ಕಲಬುರಗಿ ಜಿಲ್ಲೆಯ ಉದನೂರ ಗ್ರಾಮದವರಾಗಿದ್ದು, ಕಳೆದ 11 ವರ್ಷದಿಂದ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡಿದ್ದರು. ಸದ್ಯ ಯಾದಗಿರಿ ಬಸ್ ಡಿಪೋದಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ದರ ಏರಿಕೆ: ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

ಸೋಮವಾರ ಸಂಜೆ ಕಾಶಿನಾಥ್ ಕೆಲಸಕ್ಕೆ ತೆರಳಿದ್ದರು. ಆದರೆ ತಡರಾತ್ರಿ ಮನೆ ಬಂದಿರುವ ಕಾಶಿನಾಥ್, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಗುರುಮಿಠಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಓಮಿಕ್ರಾನ್ ರೂಪಾಂತರಿ ನಮ್ಮ ದೇಶದಲ್ಲೂ ಇರಬಹುದು: ಡಾ.ಸಿ.ಎಸ್ ಮಂಜುನಾಥ್

Leave a Reply

Your email address will not be published.

Back to top button