– ಶುಕ್ರವಾರ ಬೆಳಗ್ಗಿನ ಜಾವ ಮೆಡಿಕಲ್ ಟೆಸ್ಟ್ ಸಾಧ್ಯತೆ
ಬೆಂಗಳೂರು: 35 ದಿನಗಳ ಬಳಿಕ ಬೆಂಗಳೂರಿಗೆ ಬಂದಿಳಿದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನ ಎಸ್‌ಐಟಿ ಅಧಿಕಾರಿಗಳು ಏರ್‌ಪೋರ್ಟ್‌ನಲ್ಲೇ ಬಂಧಿಸಿ, ಎಸ್‌ಐಟಿ ಕಚೇರಿಗೆ ಕರೆದೊಯ್ದಿದ್ದಾರೆ. ಪ್ರಜ್ವಲ್ ಅವರನ್ನು ಅರೆಸ್ಟ್ ಮಾಡಿದ ಬಳಿಕ ಏನೆಲ್ಲಾ ಬೆಳವಣಿಗೆ ಆಯ್ತು? ಮುಂದಿನ ಕ್ರಮಗಳೇನು ಎಂಬ ಪಿನ್ ಟು ಪಿನ್ ಡಿಟೇಲ್ಸ್ ಇಲ್ಲಿದೆ…
Advertisement
* ಶುಕ್ರವಾರ ಮಧ್ಯರಾತ್ರಿ 12:35ರ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಅವರಿದ್ದ ಲುಫ್ತಾನ್ಸಾ ಏರ್‌ಲೈನ್ಸ್‌ನ (Lufthansa Airlines) DLH 764 A-359 ವಿಮಾನ ಲ್ಯಾಂಡಿಗ್ ಆಯಿತು. ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!
Advertisement
* ವಿಮಾನ ಲ್ಯಾಂಡಿಂಗ್ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸಿಐಎಸ್‌ಎಫ್ ಸಿಬ್ಬಂದಿ ವಿಮಾನದ್ವಾರದಲ್ಲೇ ಸುತ್ತುವರಿದು ಪ್ರಜ್ವಲ್ ಅವರನ್ನ ವಶಕ್ಕೆ ಪಡೆಯಲು ಮುಂದಾದರು. ವಿಮಾನ ನಿಲ್ದಾಣದಲ್ಲಿ ಮಿಗ್ರೇಷನ್ ಅಧಿಕಾರಿಗಳು ಇಮಿಗ್ರೇಷನ್ ಪ್ರಕ್ರಿಯೆ (ಲಗೇಜ್ ಪರಿಶೀಲಿಸಿ, ಭಾರತಕ್ಕೆ ಮರಳಿರುವುದಾಗಿ ಸ್ಟ್ಯಾಂಪ್ ಹಾಕಿದ್ದಾರೆ) ಪೂರ್ಣಗೊಳಿಸುತ್ತಿದ್ದಂತೆ ಎಸ್‌ಐಟಿಗೆ ಹಸ್ತಾಂತರಿಸಿದ್ದಾರೆ.
Advertisement
* ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ. ಇದನ್ನೂ ಓದಿ: 35 ದಿನಗಳ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್!
Advertisement
* ಮಾಧ್ಯಮದವರ ಕಣ್ತಪ್ಪಿಸಲು ಮಾರ್ಗ ಬದಲಿಸಿದ್ದ ಎಸ್‌ಐಟಿ ಅಧಿಕಾರಿಗಳು ಮಧ್ಯರಾತ್ರಿ 2 ಗಂಟೆ ವೇಳೆಗೆ ಎಸ್‌ಐಟಿ ಕಚೇರಿಗೆ ಕರೆತಂದಿದ್ದಾರೆ.
* ಪ್ರಜ್ವಲ್ ರೇವಣ್ಣ ಅವರು ಮೇಲ್ನೋಟಕ್ಕೆ ಆರೋಗ್ಯವಾಗಿರುವಂತೆ ಕಂಡುಬಂದಿದ್ದಾರೆ. ಹಾಗಾಗಿ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಗಿದೆ. ಶುಕ್ರವಾರ ಬೆಳಗ್ಗಿನ ಜಾವ ಅವರನ್ನ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗುತ್ತದೆ. ವೈದ್ಯಕೀಯ ಪರೀಕ್ಷೆ ನಂತರ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಸ್‌ಐಟಿ ಮೂಲಗಳು ತಿಳಿಸಿವೆ.