ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2017ರ ದಸರಾ ಉದ್ಘಾಟಕರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಿದೆ.
ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಅವರಿಗೆ ದಸರಾಗೆ ಆಗಮಿಸಿ ಉದ್ಘಾಟನೆ ನೆರವೇರಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಮನವಿ ಮಾಡಿದ್ದಾರೆ.
Advertisement
ಮೈಸೂರು ಮಹಾನಗರದ ಪಾಲಿಕೆ ಮೇಯರ್ ರವಿಕುಮಾರ್‍ರಿಂದ ನಿಸಾರ್ ಅಹ್ಮದ್ ಅವರನ್ನು ಸ್ವಾಗತಿಸಿದ್ದಾರೆ. ದಸರಾ ಉಪಸಮಿತಿಯ ಅಧಿಕಾರಿಗಳು ಬೆಂಗಳೂರಿನ ನಾಗರಬಾವಿಯಲ್ಲಿರುವ ನಿಸಾರ್ ಅಹ್ಮದ್ ನಿವಾಸಕ್ಕೆ ತೆರಳಿ ಈ ಆಹ್ವಾನವನ್ನು ನೀಡಿದ್ದಾರೆ. ಮೈಸೂರು ಪೇಟ ತೊಡಿಸಿ ಜಿಲ್ಲಾಡಳಿತ ಆಮಂತ್ರಣ ನೀಡಿದೆ.
Advertisement
ಇದನ್ನೂ ಓದಿ: ಮೈಸೂರು ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್!
Advertisement
ನಾಡಹಬ್ಬ ದಸರಾ ಉತ್ಸವವನ್ನು ಈ ಬಾರಿಯೂ ಸಾಂಪ್ರದಾಯಿಕ ಮತ್ತು ಹೆಚ್ಚು ಜನಾಕರ್ಷಕವಾಗಿ ಆಚರಿಸಲಾಗುವುದು. ದಸರಾ ಉತ್ಸವ ಸೆಪ್ಟೆಂಬರ್ 21ರಿಂದ 30ರ ವರೆಗೆ ನಡೆಯಲಿದೆ. 21ರಂದು ಬೆಳಗ್ಗೆ 9.15ಕ್ಕೆ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ ನೆರವೇರಲಿದೆ. ಜಂಬೂ ಸವಾರಿಯ ದಿನವಾದ 29ರಂದು ಮಧ್ಯಾಹ್ನ 1.15ರಿಂದ 1.43ರೊಳಗೆ ನಂದಿ ಧ್ವಜಕ್ಕೆ ಪೂಜೆ ಮತ್ತು 3.13ರಿಂದ 3.40ರೊಳಗೆ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.
Advertisement
ಇದನ್ನೂ ಓದಿ: ಮೈಸೂರು: ದಸರಾ ಗಜಪಡೆಯ ತಾಲೀಮು ಪ್ರಾರಂಭ
ಇದನ್ನೂ ಓದಿ: ದಸರಾಗಾಗಿ ಬಂದ ಗಜಪಡೆಯ ದೇಹ ತೂಕದಲ್ಲಿ ಭಾರೀ ಇಳಿಕೆ