ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ (Mysuru Dasara- 2022) ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ (S T Somashekhar) ಅವರು ಗುರುವಾರ ಆಹ್ವಾನ ನೀಡಿದರು.
Advertisement
ಈ ಸಂದರ್ಭದಲ್ಲಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle), ಸಂಸದ ಪ್ರತಾಪ್ ಸಿಂಹ (Pratap Simha), ಅಣ್ಣಸಾಹೇಬ ಶಂಕರ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್ ( Mysuru Mayor Shivakumar) ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ಮೈಸೂರು ಜಿಲ್ಲೆ ಶಾಲೆಗಳಿಗೆ ಸೆ.26 ರಿಂದ ಅ.9ರವರೆಗೂ ದಸರಾ ರಜೆ ಘೋಷಣೆ
Advertisement
Advertisement
ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿ (Chamundeshwari) ಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
Advertisement
ಇದೇ ಪ್ರಥಮಬಾರಿಗೆ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿದ್ದಾರೆ. ಈಗಾಗಲೇ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರಲ್ಲ: ಎಸ್.ಟಿ.ಸೋಮಶೇಖರ್
ರಾಜ್ಯ ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ಸಚಿವರು, ಶಾಸಕರು ಸೇರಿದಂತೆ ಗಣ್ಯಾತಿಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ.