ಬೆಂಗಳೂರು: ತುಳು(Tulu) ಭಾಷೆಯನ್ನು ರಾಜ್ಯದಲ್ಲಿ (Karnataka) ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ (Mohan Alva) ನೇತೃತ್ವದ ತಂಡವನ್ನು ರಚಿಸಲಾಗಿದೆ.
ಕೇಶವ ಬಂಗೇರ, ಡಾ. ಮಾಧವ ಕೊಣಾಜೆ, ಗಣೇಶ್ ಅಮೀನ್ ಸಂಕಮಾರ್, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
Advertisement
ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ.
— Sunil Kumar Karkala (@karkalasunil) January 30, 2023
Advertisement
ಒಂದು ವಾರದಲ್ಲಿ ವರದಿ ಕೊಡುವಂತೆ ಈ ಸಮಿತಿಗೆ ಸರ್ಕಾರ ಸೂಚನೆ ನೀಡಿದೆ. ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂದು ಸಂಘ, ಸಂಸ್ಥೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಸಮಿತಿ ರಚಿಸಿ ಆದೇಶ ಮಾಡಿದೆ.
Advertisement
ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯೂ ಒಂದಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಜನರು ತುಳು ಭಾಷೆ ಮಾತನಾಡುತ್ತಾರೆ.
Advertisement
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ (Sunil Kumar) ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ ಎಂದು ಟ್ವೀಟ್ ನಲ್ಲಿ ಸಚಿವ ಸುನೀಲ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k