ರಾಮನಗರ: ಬಿಡದಿ (Bidadi) ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿಗಳು ಘರ್ಜನೆ ಮಾಡಿದ್ದು, ಪುರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫುಟ್‌ಪಾತ್ ಒತ್ತುವರಿ ತೆರವು ಮಾಡಿದ್ದಾರೆ.
ಬಿಡದಿಯ ಬಿಜಿಎಸ್ ಸರ್ಕಲ್‌ನಿಂದ ಸಿಲ್ಕ್ ಫಾರಂವರೆಗೆ ಫುಟ್‌ಪಾತ್ (Footpath) ಮೇಲೆ ಅಂಗಡಿ ಮಳಿಗೆಗಳ ನಿರ್ಮಾಣ ಮಾಡಿಕೊಂಡು ವ್ಯಾಪಾರ-ವಹಿವಾಟು ನಡೆಸಲಾಗುತ್ತಿತ್ತು. ಇದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಫುಟ್‌ಪಾತ್ ತೆರವು ಮಾಡುವಂತೆ ಅಂಗಡಿ ಮಾಲೀಕರಿಗೆ ಪುರಸಭೆ ನೋಟಿಸ್ ನೀಡಿತ್ತು. ಇದನ್ನೂ ಓದಿ: ದೇಶ ತೊರೆಯಿರಿ ಅಥವಾ ಜೈಲು ಶಿಕ್ಷೆ ಅನುಭವಿಸಿ: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ
ನೋಟಿಸ್‌ಗೂ ಬಗ್ಗದ ಅಂಗಡಿ ಮಾಲೀಕರಿಗೆ ಇಂದು ಪುರಸಭೆ ಶಾಕ್ ನೀಡಿದ್ದು, ಬೆಳ್ಳಂಬೆಳಗ್ಗೆ ಜೆಸಿಬಿ ಮೂಲಕ ಪುರಸಭೆ ಅಧಿಕಾರಿಗಳೇ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಫುಟ್‌ಪಾತ್ ಒತ್ತುವರಿ ತೆರವು ಮಾಡಿ, ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸಿ, ಅಂಗಡಿ ಮಾಲೀಕರಿಗೆ ಮತ್ತೆ ಒತ್ತುವರಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗ್ಯಾಸ್ ಕಟರ್ ಬಳಸಿ ಎಟಿಎಂನಿಂದ 18 ಲಕ್ಷ ರೂ. ದೋಚಿದ ಖದೀಮರು