ಚಾಮರಾಜನಗರ: ಕಾಡಾನೆಯೊಂದಿಗೆ (Elephant) ಸೆಲ್ಫಿ ಕ್ಲಿಕ್ಕಿಸಿಕೊಂಡ ಇಬ್ಬರು ಪ್ರವಾಸಿಗರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಿರುವ ಘಟನೆ ಚಾಮರಾಜನಗರ (Chamrajnagar) ಜಿಲ್ಲೆಯ ಗಡಿಯ ತಮಿಳುನಾಡಿನ ಅಸನೂರು ಬಳಿ ನಡೆದಿದೆ.
ತೆಲಂಗಾಣ ನಿಜಾಮ್‍ಪೇಟೆ ಮೂಲದ ದಿಲೀಪ್ ಕುಮಾರ್ (42) ಹಾಗೂ ಶ್ಯಾಂಪ್ರಸಾದ್(31) ದಂಡ ಕಟ್ಟಿರುವ ಪ್ರವಾಸಿಗರು. ಕಾರಿನಲ್ಲಿ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಮೂಲಕ ಇವರು ಕೊಯಮತ್ತೂರಿಗೆ ತೆರಳುತ್ತಿದ್ದರು. ಈ ವೇಳೆ ಆಸನೂರು ಬಳಿ ಆನೆ ನಿಂತಿದ್ದನ್ನು ನೋಡಿದ್ದಾರೆ. ನಂತರ ಕಾರಿನಿಂದ ಇಳಿದು ಕಾಡಾನೆಯ ಸಮೀಪ ಹೋಗಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನೂ ಓದಿ: ಸದನದಲ್ಲಿ ಸಿದ್ದರಾಮಯ್ಯ-ಹೆಚ್‌ಡಿಕೆ ಮಧ್ಯೆ ಬೆಂಕಿ ಫೈಟ್
ಈ ವೇಳೆ ಗಸ್ತು ತಿರುಗುತ್ತಿದ್ದ ತಮಿಳುನಾಡಿನ (Tamil Nadu) ಅರಣ್ಯ ಇಲಾಖೆ (Forest Department) ಸಿಬ್ಬಂದಿ ಗಮನಿಸಿದ್ದಾರೆ. ಇನ್ನೇನೂ ವಿಚಾರಿಸಬೇಕು ಎನ್ನುವಷ್ಟರಲ್ಲಿ ಕಾರು ಹತ್ತಿ ಪರಾರಿಯಾಗಿದ್ದರು. ಬಳಿಕ ಬಣ್ಣಾರಿ ಚೆಕ್ ಪೋಸ್ಟ್‌ಗೆ ಸಿಬ್ಬಂದಿ ಮಾಹಿತಿ ನೀಡಿದ್ದರು. ಅಲ್ಲಿ ಕಾರನ್ನು ತಡೆದು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೇಜಾವಾಬ್ದಾರಿ ತೋರಿದ ಇಬ್ಬರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಇದನ್ನೂ ಓದಿ: Chandrayaan-3: ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಜು.14, ಮಧ್ಯಾಹ್ನ 2:35ಕ್ಕೆ ಉಡಾವಣೆ
Web Stories