ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ – 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

Public TV
1 Min Read
Raichur Illegal sand mining

ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ (Illegal Sand Trade) ಅವ್ಯಾಹತವಾಗಿ ನಡೆಯುತ್ತಿದ್ದು, ಬೃಹತ್ ಅಕ್ರಮ ಮರಳು ಅಡ್ಡಾದ ಮೇಲೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಸುಮಾರು 1,58,26,070 ರೂ. ಮೊತ್ತದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ.

Raichur Illegal Sand Mining 1

ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಚಿಕ್ಕರಾಯಕುಂಪಿಯಲ್ಲಿ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 20,033 ಮೆಟ್ರಿಕ್ ಟನ್ ನಷ್ಟು ಮರಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜಮೀನು ಮಾಲೀಕರಾದ ಚಂದ್ರಮ್ಮ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: ಒಂದೇ ವಾರದಲ್ಲಿ 25,900 ಕೊರೊನಾ ಪ್ರಕರಣಗಳು ಪತ್ತೆ- ಸಿಂಗಾಪುರದಲ್ಲಿ ಮಾಸ್ಕ್‌ ಕಡ್ಡಾಯ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ (Department of Mines and Earth Sciences) ಅಧಿಕಾರಿ ಪುಷ್ಪಲತಾ ಎಸ್ ಕವಲೂರು ನೇತೃತ್ವದಲ್ಲಿ ದಾಳಿ ನಡೆದಿದೆ. ಅಧಿಕಾರಿಗಳು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: 2014; ಪಾತಾಳಕ್ಕೆ ಕುಸಿದ ಕಾಂಗ್ರೆಸ್ – ದಿಲ್ಲಿ ಗದ್ದುಗೆಯೇರಿದ ನರೇಂದ್ರ ಮೋದಿ

Share This Article