ಒಮನ್: ಹಾರ್ಮುಜ್ ಜಲಸಂಧಿಯ ಸಮೀಪ ಒಮನ್ (Oman) ಕರಾವಳಿಯಲ್ಲಿ ಸಂಚರಿಸುತ್ತಿದ್ದ ತೈಲ ಟ್ಯಾಂಕರ್‌ಗೆ ಅಪರಿಚಿತ ಪ್ರೊಜೆಕ್ಟೈಲ್ (Projectile) ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಈ ಬಗ್ಗೆ ಯುನೈಟೆಡ್ ಕಿಂಗ್‌ಡಮ್ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ (UKMTO) ಮಾಹಿತಿ ನೀಡಿದೆ. ಒಮಾನ್‌ನ ಲಿಮಾ ಪ್ರದೇಶದಿಂದ ಸುಮಾರು 8 ನಾಟಿಕಲ್ ಮೈಲು (14.816 ಕಿಲೋಮೀಟರ್) ದೂರದಲ್ಲಿ ದಕ್ಷಿಣ ದಿಕ್ಕಿನತ್ತ ಸಾಗುತ್ತಿದ್ದ ಟ್ಯಾಂಕರ್‌ಗೆ ಈ ಅಪಘಾತ ಸಂಭವಿಸಿದೆ. ಅಪರಿಚಿತ ವಸ್ತು ಟ್ಯಾಂಕರ್‌ನ ಬದಿಗೆ ಡಿಕ್ಕಿ ಹೊಡೆದ ಕೂಡಲೇ ಬೆಂಕಿ ಹೊತ್ತಿಕೊಂಡಿದೆ ಎಂದು ಯುಕೆಎಮ್‌ಟಿಒ ತನ್ನ X ಖಾತೆಯಲ್ಲಿ ತಿಳಿಸಿದೆ.
ಘಟನೆಯಲ್ಲಿ ಯಾವುದೇ ಸಿಬ್ಬಂದಿಗೆ ಗಾಯಗಳಾಗಿಲ್ಲ. ಸಾವುನೋವು ಅಥವಾ ಪರಿಸರ ಹಾನಿ ಸಂಭವಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಟ್ಯಾಂಕರ್‌ನ ಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.ಇದನ್ನೂ ಓದಿ: ಓವರ್ ಟೇಕ್ ವಿಚಾರಕ್ಕೆ ಕಿರಿಕ್; ಬೆಂ-ಮೈ ಎಕ್ಸ್‌ಪ್ರೆಸ್ ವೇಯಲ್ಲಿ ಕಾರು ಅಡ್ಡಗಟ್ಟಿ ಪುಂಡರಿಂದ ಹಲ್ಲೆ
ಈ ಘಟನೆಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಆರಂಭವಾಗಿದೆ. ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಎಲ್ಲಾ ಹಡಗುಗಳು ಎಚ್ಚರಿಕೆಯಿಂದ ಸಾಗುವಂತೆ ಹಾಗೂ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ UKMTO ಸೂಚನೆ ನೀಡಿದೆ.ಇದನ್ನೂ ಓದಿ: ಪೋರ್ಚುಗಲ್ ಹೊರದಬ್ಬಿದ ಸ್ಪೇನ್ – ವಿಶ್ವಕಪ್ ಕನಸು ಭಗ್ನ, ಮೈದಾನದಲ್ಲೇ ಕಣ್ಣೀರಿಟ್ಟ ರೊನಾಲ್ಡೋ
