ಚೆನ್ನೈ: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ (Electric Vehicle) ಉತ್ಪಾದನೆ ಹೆಚ್ಚಿಸುವ ದೃಷ್ಟಿಯಿಂದ ತಮಿಳುನಾಡು (Tamil Nadu) ಸರ್ಕಾರ ಓಲಾ ಎಲೆಕ್ಟ್ರಿಕ್ ಮೊಬಿಲಿಟಿ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, 7,614 ಕೋಟಿ ರೂ. ಹೂಡಿಕೆಯ 20 GW ಬ್ಯಾಟರಿ ಸಾಮರ್ಥ್ಯದ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸಿಎಂ ಎಂ.ಕೆ ಸ್ಟಾಲಿನ್ (MK Stalin) ಸಹಿ ಹಾಕಿದರು.
ತಮಿಳುನಾಡು ಸರ್ಕಾರವು ಫೆ. 14ರಂದು ತನ್ನ ಎಲೆಕ್ಟ್ರಿಕ್ ವೆಹಿಕಲ್ (ಇವಿ) ನೀತಿ 2023 ಅನ್ನು ಅನಾವರಣಗೊಳಿಸಿತು. ಇವಿ ಉದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ 50,000 ಕೋಟಿ ರೂ.ಗಳಷ್ಟು ಹೂಡಿಕೆಗಳನ್ನು ಗಳಿಸುವ ಮತ್ತು 1.50 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ.
Advertisement
Advertisement
ಹೊಸ ಒಪ್ಪಂದದಿಂದ 3,111 ಜನರಿಗೆ ಹೊಸ ಉದ್ಯೋಗ ಸಿಗಲಿದೆ ಎಂದು ನಿರೀಕ್ಷೆ ಮಾಡಿದ್ದು, ರಾಜ್ಯದಲ್ಲಿ 4 ಚಕ್ರದ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ. ಇದರಿಂದ ಮಾಲಿನ್ಯದ ಪ್ರಮಾಣ ತಗುಲಿದ್ದು, ಪೆಟ್ರೋಲ್, ಡಿಸೇಲ್ ಮೇಲಿನ ಅವಲಂಬನೆಯೂ ಕಡಿಮೆಯಾಗಲಿದೆ. ಇದನ್ನೂ ಓದಿ: ಕೊನೆ ಉಸಿರೆಳೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಟಿಪ್ಪು, ಭಯೋತ್ಪಾದನೆ, ಎಸ್‍ಡಿಪಿಐ ಆಕ್ಸಿಜನ್ ಆಗ್ತಿದೆ: ಯುಟಿ ಖಾದರ್
Advertisement
Advertisement
ಶೆ. 100ರಷ್ಟು ರಸ್ತೆ ತೆರಿಗೆ ವಿನಾಯಿತಿಯೊಂದಿಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಗೆ ಸರ್ಕಾರ ಉತ್ತೇಜನ ನೀಡುತ್ತಿದ್ದು, ಕಳೆದ 5 ವರ್ಷಗಳಲ್ಲಿ ರಾಜ್ಯವು ಏಥರ್ ಎಲೆಕ್ಟ್ರಿಕ್ ಮತ್ತು ಓಲಾ ಎಲೆಕ್ಟ್ರಿಕ್ ಸೇರಿದಂತೆ ಹೊಸ ಕಂಪನಿಗಳಿಗೆ ಅವಕಾಶ ನೀಡುತ್ತಿದ್ದು EV ಉತ್ಪಾದನಾ ಕೇಂದ್ರವಾಗಿ ರೂಪಾಂತರಗೊಳ್ಳುತ್ತಿದೆ. ಇದನ್ನೂ ಓದಿ: ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಯಲ್ಲಿ ವಾರ್ಷಿಕ ಪರೀಕ್ಷೆ ಬರೆದ ಮಹಿಳೆ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k