ಹೈದರಾಬಾದ್: 60 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ 50 ವರ್ಷದ ಮಧ್ಯಮ ವಯಸ್ಕರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ವಾರ ತೆಲಂಗಾಣದ ಸಿಕಂದರಾಬಾದಿನಲ್ಲಿ 60 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಕಾಜ್‍ಗಿರಿ ನಿವಾಸಿಗಳಾದ 50 ವರ್ಷದ ಆಂಥೋನಿ ಜಾರ್ಜ್ ಹಾಗೂ 53 ವರ್ಷದ ಆತನ ಸ್ನೇಹಿತ ನೆನವತ್ ವಿಜಯ್ ಕುಮಾರ್‍ರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳವಾರ ರಾತ್ರಿ 8.15ರ ಸುಮಾರಿಗೆ ಘಟನೆ ನಡೆದಿತ್ತು. 60 ವರ್ಷದ ವೃದ್ಧೆ ಮಿರ್ಜಾಲ್ಗುಡ ಕ್ರಾಸ್ ಬಳಿ ಭಿಕ್ಷೆ ಬೇಡುತ್ತಿದ್ದ ವೇಳೆ ಈ ಇಬ್ಬರು ಪುರುಷರು ಅವಳಿಗೆ ಮದ್ಯದ ಆಸೆ ತೋರಿಸಿ, ಮನೆಗೆ ಕರೆದೊಯ್ದಿದ್ದಾರೆ. ವೃದ್ಧೆಗೆ ಕಂಠ ಪೂರ್ತಿ ಕುಡಿಸಿದ್ದರಿಂದ ಪ್ರಜ್ಞೆ ಕಳೆದುಕೊಂಡಿದ್ದಾರೆ. ನಂತರ ಬೇರೆ ರೂಮಿಗೆ ಎಳೆದೊಯ್ದು ಇಬ್ಬರೂ ಅತ್ಯಾಚಾರ ಎಸಗಿದ್ದಾರೆ.
ಸಂತ್ರಸ್ತೆ ಎಚ್ಚರಗೊಳ್ಳುತ್ತಿದ್ದಂತೆ ಗಾಬರಿಯಾಗಿದ್ದು, ಸಹಾಯಕ್ಕಾಗಿ ಕಿರುಚಿಕೊಂಡಿದ್ದಾರೆ. ಆಗ ಸ್ಥಳೀಯರು ಸಹಾಯಕ್ಕಾಗಿ ಧಾವಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ, ಸಂತ್ರಸ್ತೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ. ಪ್ರಕರಣದ ನಂತರ ಆರೋಪಿಗಳು ನಾಪತ್ತೆಯಾಗಿದ್ದರು. ಇದೀಗ ಪೊಲೀಸರು ಅವರನ್ನು ಪತ್ತೆ ಹಚ್ಚಿದ್ದು, ಮಿರ್ಜಲ್ಗುಡ ಕ್ರಾಸ್ ಬಳಿ ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿಯ ಅತ್ಯಾಚಾರ, ಅಪರಾಧ ಬೆದರಿಕೆಗೆ ಸಂಬಂಧಿಸಿದ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.