ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ (Sri Ram Sena) ಪ್ರತಿಭಟನೆ ಮೂಲಕ ಆಕ್ರೋಶ ಹೊರಹಾಕಿದೆ. ಹಳೇ ಹುಬ್ಬಳ್ಳಿ ದಿಡ್ಡಿ ಓಣಿ ಹನುಮಾನ್ ದೇವಸ್ಥಾನದಿಂದ ಗಲಭೆ ನಡೆದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ತನಕ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಎಡಬಿಡದೆ ಸುರಿದ ಮಳೆಯಲ್ಲಿ ಪ್ರತಿಭಟನೆ ನಡೆಸಿ, ಸಿದ್ದರಾಮಯ್ಯ (CM Siddaramaiah) ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.
ಈ ವೇಳೆ ಸಿದ್ದರಾಮಯ್ಯ ಭಾವಚಿತ್ರ ಸುಡಲು ಪ್ರತಿಭಟನಾಕಾರರು ಮುಂದಾಗಿದ್ದು, ಇದನ್ನು ತಡೆಯಲು ಪೊಲೀಸರು ಪ್ರಯತ್ನ ಮಾಡಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಉಂಟಾಯಿತು. ಬಳಿಕ ತಹಶಿಲ್ದಾರರ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಮಂತ್ರಾಲಯಕ್ಕೆ ಹೊರಟಿದ್ದ ಕ್ರೂಸರ್ ಪಲ್ಟಿ: ಚಾಲಕನ ಕೈ ಮುರಿತ, ಹಲವರಿಗೆ ಗಾಯ
ಈ ಬಗ್ಗೆ ಮಾತನಾಡಿದ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಹಳೇ ಹುಬ್ಬಳ್ಳಿ ಗಲಭೆಯಲ್ಲಿ ತಮ್ಮ ಸಮಸ್ಯೆಯನ್ನು ಪೊಲೀಸರ ಜೊತೆಗೆ ಬಗೆಹರಿಸಿಕೊಳ್ಳಬಹುದಿತ್ತು. ಅದು ಬಿಟ್ಟು ಹನುಮಾನ್ ದೇವಸ್ಥಾನದ ಮೇಲೆ ಯಾಕೆ ದಾಳಿ ಮಾಡಿದರು? ಮುಸ್ಲಿಂ ಗಲಭೆಕೋರರಿಗೆ ತಾಕತ್ತು ಇದ್ದರೆ ಮತ್ತೆ ದೇವಸ್ಥಾನ ಮುಟ್ಟಿ ನೋಡಿ. ಹಿಂದೂಗಳ ತಾಕತ್ತು ನಿಮಗೆ ತೋರಿಸುತ್ತೇವೆ. ರಾಜ್ಯ ಸರ್ಕಾರ ಗಲಭೆ ಕೇಸ್ ವಾಪಸ್ ನಿರ್ಧಾರವನ್ನು ಒಂದು ವಾರದೊಳಗೆ ವಾಪಸ್ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಹುಬ್ಬಳ್ಳಿ (Hubballi) ಬಂದ್ ಮಾಡಿ ಉಗ್ರ ಹೋರಾಟಕ್ಕೆ ರಾಜ್ಯಾದ್ಯಂತ ಕರೆ ನೀಡುತ್ತೇವೆ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಡೂಟ – ಬಿರಿಯಾನಿ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಇದು ಬರೀ ಸಾಂಕೇತಿಕ ಹೋರಾಟ ಅಷ್ಟೇ. ಸಿಎಂ ರಾಜ್ಯವನ್ನು ಸಿರಿಯಾ, ಅಫ್ಘಾನಿಸ್ತಾನ ಮಾಡಲು ಹೊರಟಿದ್ದಾರೆ. ಅತಿಯಾಗಿ ಮುಸ್ಲಿಂ ತುಷ್ಟೀಕರಣ ನಡೆಯುತ್ತಿದೆ. ಇದಕ್ಕೆ ಸ್ಥಳೀಯ ಶಾಸಕ ಪ್ರಸಾದ್ ಅಬ್ಬಯ್ಯ ಸಾಥ್ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಅಪಮಾನ ಮಾಡುತ್ತಿದೆ. ಪೊಲೀಸರ ಆತ್ಮಸ್ತೈರ್ಯ ಕುಗ್ಗಿಸುವ ಕೆಲಸ ಆಗುತ್ತಿದೆ. ಇದನ್ನು ಶ್ರೀರಾಮಸೇನೆ ಖಂಡನೆ ಮಾಡುತ್ತಿದೆ ಎಂದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ ಕ್ಷೇತ್ರದ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ಕಾಲರ್ಶಿಪ್ ಸ್ಕೀಂ ಘೋಷಿಸಿದ ಶಾಸಕ ಪ್ರದೀಪ್ ಈಶ್ವರ್