ಶಿವಮೊಗ್ಗ: ಅನಾರೋಗ್ಯ ಸಮಸ್ಯೆಯಿಂದ ಬೇಸತ್ತು, ವ್ಯಕ್ತಿಯೊಬ್ಬರು ಬಂದೂಕಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಬಳಿಯ ತಟ್ಟೆಕೊಡ್ಲು ಎಂಬಲ್ಲಿ ನಡೆದಿದೆ.
ಗ್ರಾಮದ ನಿವಾಸಿ ರಾಮಚಂದ್ರ ರಾವ್ (85) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮಧ್ಯರಾತ್ರಿ 1:30ರ ಸುಮಾರಿಗೆ ತಮ್ಮ ಸಿಂಗಲ್ ಬ್ಯಾರಲ್ ಗನ್‌ನಿಂದ ಕುತ್ತಿಗೆಯ ಭಾಗಕ್ಕೆ ಶೂಟ್ ಮಾಡಿಕೊಂಡಿದ್ದಾರೆ. ಪರಿಣಾಮ ತಲೆ ಸಂಪೂರ್ಣವಾಗಿ ಛಿದ್ರಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸಿಸಿಟಿವಿಯಿಂದ ಪತ್ನಿ, ಅಪ್ರಾಪ್ತ ಪುತ್ರನ ಕ್ರೌರ್ಯ ಬಯಲು – ಇದಕ್ಕೇನಾ ಶವ ಸುಡಲು ಪಟ್ಟುಹಿಡಿದಿದ್ದು ವೀಣಾ?
ರಾಮಚಂದ್ರ ರಾವ್ ಅವರು ಕಳೆದ ಕೆಲವು ದಿನಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದಿದ್ದರು. ಅಂದಿನಿಂದ ಮಲಗುವ ವೇಳೆ ತೀವ್ರ ತಲೆನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಹ ಪಡೆದಿದ್ದರು. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಮನನೊಂದಿದ್ದ ಅವರು ಎಂದಿನಂತೆ ಮೇ 31ರ ರಾತ್ರಿಯೂ ಕೂಡ ಮಕ್ಕಳೊಂದಿಗೆ ಮಾತನಾಡಿದ್ದಾರೆ. ಬಳಿಕ ಎಲೆ-ಅಡಿಕೆ ಹಾಕಿಕೊಂಡು ತಮ್ಮ ಕೋಣೆಗೆ ಮಲಗಲು ತೆರಳಿದ್ದರು.
ಮಧ್ಯರಾತ್ರಿ 1:30ರ ಸುಮಾರಿಗೆ ಕೋಣೆಯ ಒಳಗಿನಿಂದ ಭಾರೀ ಸದ್ದು ಕೇಳಿಬಂದಿದ್ದು, ಗಾಬರಿಗೊಂಡು ಮಕ್ಕಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಭೀಕರ ಅಪಘಾತ – ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ RCB ಅಭಿಮಾನಿ ಸಾವು
