Connect with us

Chikkaballapur

ಮೂತ್ರ ವಿಸರ್ಜನೆಗೆಂದು ರಸ್ತೆ ದಾಟೋ ವೇಳೆ ಕಾರು ಡಿಕ್ಕಿ ಹೊಡೆದು ವೃದ್ಧ ಸಾವು

Published

on

ಚಿಕ್ಕಬಳ್ಳಾಪುರ: ಬೆಂಗಳೂರು ಉತ್ತರ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷನಿಗೆ ಸೇರಿದ ಕಾರು ವೃದ್ಧನಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚದಲಪುರದ ಎಸ್‍ಪಿ ಕಚೇರಿ ಬಳಿ ನಡೆದಿದೆ.

ಗೌರಿಬಿದನೂರು ತಾಲೂಕು ಕಾಟನಕಲ್ಲು ಗ್ರಾಮದ ಖಾಜಾಬೇಗ್(75) ಮೃತಪಟ್ಟ ವೃದ್ಧ. ಬಾಗೇಪಲ್ಲಿ-ಚಿಕ್ಕಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸಿಂಗನಾಕನಹಳ್ಳಿಯ ಗ್ರಾಪಂ ಅಧ್ಯಕ್ಷ ಲೋಕೇಶ್ ಎಂಬವರ ಕಾರು ಎನ್ನಲಾಗಿದ್ದು, ರಸ್ತೆ ದಾಟುತ್ತಿದ್ದ ವೇಳೆ ವೃದ್ಧ ಖಾಜಾಬೇಗ್ ಗೆ ಡಿಕ್ಕಿ ಹೊಡೆದಿದೆ.

ಕೂಡಲೇ ಆಸ್ಪತ್ರೆಗೆ ಕರೆದೊಕೊಂಡು ಹೋಗುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಮೃತ ಖಾಜಾಬೇಗ್ ಕಣ್ಣಿನ ಆಸ್ಪತ್ರೆಗೆ ಸೇರಿದ ಬಸ್ ನಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಅಂತ ತೆರಳಿದ್ದರು. ಆದರೆ ಮಾರ್ಗಮಧ್ಯೆ ಮೂತ್ರ ವಿಸರ್ಜನೆ ಮಾಡಲು ಬಸ್ ನಿಂದ ಕೆಳಗೆ ಇಳಿದು ರಸ್ತೆ ದಾಟುತ್ತಿದ್ದ ಈ ವೇಳೆ ಅಪಘಾತ ಸಂಭವಿಸಿದೆ.

ಈ ಕುರಿತು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.