ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಇರುವ ಸರ್ಕಾರಿ ನೌಕರಿಗೆ ಓಪಿಎಸ್ ಜಾರಿ ಮಾಡುತ್ತೇವೆ. ಯಾವಾಗ ಮಾಡುತ್ತೇವೆ ಎಂದು ಸಮಯ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರವಾಗಿ ವಿಧಾನ ಪರಿಷತ್‌ನಲ್ಲಿ ಸಭಾ ನಾಯಕ ಬೋಸರಾಜು (NS Boseraju) ಉತ್ತರ ನೀಡಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡೇ ಪ್ರಶ್ನೆ ಕೇಳಿದರು. ಸರ್ಕಾರಿ ಎನ್‌ಪಿಎಸ್ ನೌಕರರಿಗೆ ಓಪಿಎಸ್ ಯೋಜನೆ ಜಾರಿ ಮಾಡಬೇಕು. ಓಪಿಎಸ್ ಕೊಡೋದಾಗಿ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲೂ ಸೇರಿಸಲಾಗಿತ್ತು. ನಮ್ಮ ಸರ್ಕಾರ ಬಂದಾಗ ಓಪಿಎಸ್ ಜಾರಿ ಮಾಡೋದಾಗಿ ಹೇಳಿದ್ದೆವು. ಸರ್ಕಾರ ಬಂದು 1.5 ವರ್ಷ ಆದರೂ ಯಾವುದೇ ನಿರ್ಧಾರ ಆಗಿಲ್ಲ. ಇದು ಸರಿಯಲ್ಲ. ಸರ್ಕಾರ ಸಮಿತಿ ಮಾಡಿದೆ. ಸಮಿತಿಯಿಂದ ನಮಗೇನು ಲಾಭವಿಲ್ಲ. ಓಪಿಎಸ್‌ಗಾಗಿ ಹೋರಾಟ ನಡೆಯುತ್ತಿದೆ. ಕೂಡಲೇ ಓಪಿಎಸ್ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ
ಸಿಎಂ ಸಿದ್ದರಾಮಯ್ಯ ಪರವಾಗಿ ಸಚಿವ ಬೋಸರಾಜು ಉತ್ತರ ನೀಡಿ, ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿ 2,86,445. ಸರ್ಕಾರಿ ನೌಕರರು ಒಳಪಟ್ಟಿದ್ದಾರೆ. ಓಪಿಎಸ್ ಜಾರಿ ಮಾಡುವ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ಸಮಿತಿ ಎರಡು ಸಭೆ ಮಾಡಲಾಗಿದೆ. ಸಮಿತಿ ವರದಿ ಕೊಟ್ಟ ಬಳಿಕ ಪರಿಶೀಲನೆ ಮಾಡಿ ಓಪಿಎಸ್ ಜಾರಿ ಮಾಡೋ ಬಗ್ಗೆ ನಿರ್ಧಾರ ಮಾಡುತ್ತೇವೆ. ಓಪಿಎಸ್ ಕಾಲಮಿತಿ ನೀಡಲು ಆಗಲ್ಲ. ಇಷ್ಟೇ ಸಮಯ ಒಳಗೆ ಕೊಡುತ್ತೇವೆ ಎಂದು ಹೇಳಲು ಆಗಲ್ಲ. ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ರನ್ಯಾಗೆ ಮಾತ್ರ ಸಿನಿಮಾ ನಂಟಿಲ್ಲ – ಆರೋಪಿ ತರುಣ್‌ಗೆ ಇದೆ ಟಾಲಿವುಡ್ ನಂಟು!
ಸಚಿವ ಪರಮೇಶ್ವರ್ ಮಾತಾಡಿ, ಪ್ರಣಾಳಿಕೆ ಬರೆಯೋವಾಗ ಚರ್ಚೆ ಮಾಡಿ ಇದನ್ನ ಸೇರಿಸಿದ್ದೇವೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿಲ್ಲ.ನಾವು ಕಮಿಟ್ ಆಗಿದ್ದೇವೆ. ನಾವು ಕೊಟ್ಟ ಭರವಸೆ ಈಡೇರಿಸುತ್ತೇವೆ. ಇಂದು ಆಗಬಹುದು, ನಾಳೆ ಆಗಬಹುದು. ಇದಕ್ಕೆ ಕೋಟ್ಯಂತರ ರುಪಾಯಿ ಖರ್ಚು ಆಗುತ್ತದೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಮಾನಿಟರ್‌ಗೆ ಪ್ರತಿ ಠಾಣೆಯಲ್ಲಿ ವಿಶೇಷ ವಿಭಾಗ ಸ್ಥಾಪನೆ: ಪರಮೇಶ್ವರ್