ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಂ ಇಂಡಿಯಾ (Team India) ಹಾಗೂ ಇಂಗ್ಲೆಂಡ್ (England) ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಒಲೀ ಪೋಪ್ (Ollie Pope) ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅವರು 278 ಎಸೆತಗಳಲ್ಲಿ 196 ರನ್‍ಗಳನ್ನು ಗಳಿಸಿದ್ದಾರೆ.
Advertisement
163 ರನ್‍ಗಳಿಗೆ 5 ವಿಕೆಟ್ ನಷ್ಟ ಅನುಭವಿಸಿದ್ದ ಇಂಗ್ಲೆಂಡ್‍ಗೆ ಆಸರೆಯಾಗಿ ನಿಂತ ಪೋಪ್ 3ನೇ ದಿನದಾಟದಲ್ಲಿ 154 ಎಸೆತಗಳಲ್ಲಿ ಶತಕ ಬಾರಿಸಿದ್ದರು. ನಾಲ್ಕನೇ ದಿನದಾಟದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 196 ರನ್‍ಗಳಿಸಿ ವಿಕೆಟ್ ಒಪ್ಪಿಸಿದ ಅವರು, ಕೇವಲ 4 ರನ್‍ಗಳಿಂದ ದ್ವಿಶತಕ ವಂಚಿತರಾದರು. ಇದನ್ನೂ ಓದಿ: ‘ಜೈ ಶ್ರೀರಾಮ್ ಇಂಡಿಯಾ’: ವಿಶೇಷ ಪೋಸ್ಟ್ ಮೂಲಕ ರಾಮಮಂದಿರ ಪ್ರಾಣ ಪ್ರತಿಷ್ಠೆ ಆಚರಿಸಿದ ಡೇವಿಡ್ ವಾರ್ನರ್
Advertisement
Advertisement
ಇನ್ನೂ ಈ ಮೊದಲು ಭಾರತದ ನೆಲದಲ್ಲಿ ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯಧಿಕ ರನ್‍ಗಳಿಸಿದ ಇಂಗ್ಲೆಂಡ್ ಬ್ಯಾಟರ್ ಅಲಿಸ್ಟರ್ ಕುಕ್ ಹೆಸರಿನಲ್ಲಿದ್ದ ದಾಖಲೆಯನ್ನು ಒಲೀ ಪೋಪ್ ಮುರಿದಿದ್ದಾರೆ. 2012 ರಲ್ಲಿ ಅಹಮದಾಬಾದ್‍ನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಬ್ಯಾಟರ್ ಕುಕ್ 176 ರನ್ ಬಾರಿಸಿದ್ದರು. ಇದು ದಾಖಲೆಯಾಗಿತ್ತು. ಇದೀಗ ಪೋಪ್ ಆ ದಾಖಲೆಯನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ.
Advertisement
ಆತಿಥೇಯ ಭಾರತ ತಂಡದ ವಿರುದ್ಧ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನು ಪೋಪ್ ಇದೀಗ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕ್ರಮವಾಗಿ ಆ್ಯಂಡಿ ಫ್ಲವರ್ (232), ಬ್ರೆಂಡನ್ ಮೆಕಲಂ (225) ಹಾಗೂ ಗ್ಯಾರಿ ಸೋಬರ್ಸ್ (198) ಇದ್ದಾರೆ. ಇದೀಗ 196 ರನ್ ಗಳಿಸುವ ಮೂಲಕ ಒಲೀ ಪೋಪ್ ನಾಲ್ಕನೆಯವರಾಗಿ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: IND vs ENG, 1st Test: ಟೆಸ್ಟ್ ಸರಣಿ ಮೊದಲ ದಿನದಾಟ ಅಂತ್ಯ – ಟೀಂ ಇಂಡಿಯಾ ಸ್ಪಿನ್ನರ್ಸ್ ಮಿಂಚು, ಜೈಸ್ವಾಲ್ ಫಿಫ್ಟಿ