– ಪದಕ ಗೆಲ್ಲುವ ವಿಶ್ವಾಸ ಮೂಡಿಸಿದ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ
ಪ್ಯಾರಿಸ್: 2024ರ ಮಹತ್ವದ ಒಲಿಂಪಿಕ್ಸ್ (Paris Olympics 2024) ಕ್ರೀಡಾಕೂಟದಲ್ಲಿ ಭಾರತ ಎರಡು ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ. ಇದರೊಂದಿಗೆ ಗಮನಾರ್ಹ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಇನ್ನಷ್ಟು ಪದಕಗಳನ್ನು ಬಾಚಿಕೊಳ್ಳುವ ಭರವಸೆ ಮೂಡಿಸಿದ್ದಾರೆ.
???????? ???????????????????? ????????????????????????????! India rises to the top of the table thanks to a dominating victory against Ireland.
???? Another win will confirm their qualification to the next round.
???? ???????????????????????? @sportwalkmedia ???????????? ???????????????????????????????????? ???????????????????????????????? ???????? ????????????????????????… pic.twitter.com/3pICzhxy6e
— India at Paris 2024 Olympics (@sportwalkmedia) July 30, 2024
Advertisement
ಮಂಗಳವಾರ ನಡೆದ ಹಾಕಿ ಸ್ಪರ್ಧೆಯಲ್ಲಿ ಭಾರತ ಪುರುಷರ ಹಾಕಿ ತಂಡ (India Men’s Hockey Team) ಗೆಲುವಿನ ಓಟ ಮುಂದುವರಿಸಿದೆ. ಐರ್ಲೆಂಡ್ ವಿರುದ್ಧ 2-0 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಗುಂಪು ಹಂತದಲ್ಲಿ 2ನೇ ಗೆಲುವನ್ನು ದಾಖಲಿಸಿ, ಅಂಕಪಟ್ಟಿಯಲ್ಲಿ 7 ಅಂಕ ಪಡೆದು ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಮತ್ತೊಂದು ಪದಕ ಗೆಲ್ಲುವ ವಿಶ್ವಾಸವನ್ನು ಭಾರತದ ಹಾಕಿ ತಂಡ ಮೂಡಿಸಿದೆ. ತಲಾ 2 ಪಂದ್ಯ ಗೆದ್ದಿರುವ ಬೆಲ್ಜಿಯಂ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 6 ಅಂಕ ಪಡೆದು ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಎರಡನೇ ಪದಕ – ಶೂಟಿಂಗ್‌ನಲ್ಲಿ ಭಾರತಕ್ಕೆ ಕಂಚು
Advertisement
???????? ???????????????????????????? ???????????????????????????????????? ????????????????????????????????????????????! Satwik and Chirag ease their way to another win, this time against the duo of Alfian and Muhammad. They seemed to be too strong for the Indonesian pair throughout the match.
???? They already secured qualification to the… pic.twitter.com/y8XmnsnbFL
— India at Paris 2024 Olympics (@sportwalkmedia) July 30, 2024
Advertisement
ಐರ್ಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ತಂಡ ಕ್ವಾರ್ಟರ್ ಫೈನಲ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಮುಂದಿನ ಒಂದು ಪಂದ್ಯದಲ್ಲಿ ಗೆದ್ದರೆ ಅಧಿಕೃತವಾಗಿ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದುಕೊಳ್ಳಲಿದೆ. ಈ ಹಿಂದಿನ ಪಂದ್ಯಗಳಲ್ಲಿ ಅರ್ಜೆಂಟೀನಾ ವಿರುದ್ಧ 1-1ರಲ್ಲಿ ಡ್ರಾ ಸಾಧಿಸಿದ್ದ ಭಾರತ ತಂಡ, ನ್ಯೂಜಿಲೆಂಡ್ ವಿರುದ್ಧ 3-2 ಪಾಯಿಂಟ್‌ಗಳಿಂದ ಗೆಲುವು ಸಾಧಿಸಿತ್ತು. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪಿಎಂ, ಸಿಎಂ ಅಭಿನಂದನೆ
Advertisement
ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕಮಾಲ್:
ಮಾಜಿ ವಿಶ್ವದ ನಂ.1 ತಾರಾ ಜೋಡಿ ಎಂದೆ ಹೆಸರು ಪಡೆದುಕೊಂಡಿರುವ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ (Satwiksairaj Rankireddy) ಮತ್ತು ಚಿರಾಗ್ ಶೆಟ್ಟಿ (Chirag Shetty) ಜೋಡಿ ಮಂಗಳವಾರ ಭರ್ಜರಿ ಪ್ರದರ್ಶನ ನೀಡಿದೆ. ಗ್ರೂಪ್-ಸಿ ನಲ್ಲಿರುವ ಭಾರತದ ಈ ಜೋಡಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ವಿರುದ್ಧ 21-13, 21-13 ಅಂತರದಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಭಾರತಕ್ಕೆ ಪದಕ ತಂದುಕೊಡುವ ವಿಶ್ವಾಸವನ್ನೂ ಈ ಜೋಡಿ ಮೂಡಿಸಿದೆ. ಇದನ್ನೂ ಓದಿ: IPL 2025: ಮುಂದಿನ ಐಪಿಎಲ್‌ನಲ್ಲೂ ಮಹಿ ಕಣಕ್ಕಿಳಿಯೋದು ಫಿಕ್ಸ್?