ಬೆಂಗಳೂರು: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram Mining Company Illegal Mining Case) ಬಂಧನಕ್ಕೆ ಒಳಗಾದ ಶಾಸಕ ಜನಾರ್ದನ ರೆಡ್ಡಿ (Janardhan Reddy) ಚಂಚಲಗೂಡ ಜೈಲಿನಿಂದ ಬೆಂಗಳೂರು ಪರಪ್ಪನ ಅಗ್ರಹಾರ (Parappana Agrahara) ಜೈಲಿಗೆ ಸ್ಥಳಾಂತರವಾಗಲಿದ್ದಾರೆ.
ಇಂದು ಬಾಡಿ ವಾರಂಟ್ ಮೇಲೆ ಜನಾರ್ದನ ರೆಡ್ಡಿ ಅವರನ್ನು ಹೈದರಾಬಾದ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ್ ಭಟ್ ಅವರು ಜನಾರ್ದನ ರೆಡ್ಡಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡುವಂತೆ ಆದೇಶ ಪ್ರಕಟಿಸಿ ಮುಂದಿನ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿಕೆ ಮಾಡಿದರು. ಇದನ್ನೂ ಓದಿ: ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ CRPF ಸಿಬ್ಬಂದಿ ಅರೆಸ್ಟ್ – ಜೂ.6ರ ವರೆಗೆ NIA ಕಸ್ಟಡಿಗೆ
ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದ್ದು ಖುದ್ದು ಹಾಜರಾತಿಗೆ ಕೋರ್ಟ್ ಸೂಚಿಸಿದ್ದರಿಂದ ರೆಡ್ಡಿ ಅವರನ್ನು ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದ್ದರು. ಇದನ್ನೂ ಓದಿ: ಪ್ರಜ್ವಲ್ ಮೊಬೈಲಿನಲ್ಲಿ 2000 ಮಹಿಳೆಯರ ಚಿತ್ರ: ಸಾಕ್ಷ್ಯ ನುಡಿದ ಚಾಲಕ
ಏನಿದು ಕೇಸ್?
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಮೇಲಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆ ವಿಧಿಸಿದ ನಂತರ ಪೊಲೀಸರು ರೆಡ್ಡಿಯನ್ನು ಬಂಧಿಸಿ ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡಿದ್ದರು. ಈ ಮೂಲಕ 10 ವರ್ಷಗಳ ಬಳಿಕ ಮತ್ತೆ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದಾರೆ.
ಹೈದರಾಬಾದ್‌ನ ನಾಂಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿತ್ತು. ರೆಡ್ಡಿ ಜತೆಗೆ ಒಎಂಸಿ ಕಪನಿ ವ್ಯವಸ್ಥಾಪಕ ನಿರ್ದೇಶಕ ಬಿ.ವಿ.ಶ್ರೀನಿವಾಸ ರೆಡ್ಡಿ, ರೆಡ್ಡಿ ಆಪ್ತ ಎಂ.ಅಲಿಖಾನ್, ಗಣಿ ಇಲಾಖೆ ಮಾಜಿ ಅಧಿಕಾರಿ ವಿ.ಡಿ.ರಾಜಗೋಪಾಲ್ ದೋಷಿಗಳು ಎಂದು ಹೇಳಿದೆ. ಕೋರ್ಟ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಹಾಗೂ ಒಎಂಸಿ ಗಣಿ ಕಂಪನಿಗೆ 2 ಲಕ್ಷ ರೂ. ದಂಡ ವಿಧಿಸಿದೆ.