ದೇಶದಲ್ಲಿ 1 ಸಾವಿರ ಗಡಿ ದಾಟಿದ ಓಮಿಕ್ರಾನ್‌

Public TV
1 Min Read
kwr corona test covid

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್‌ ಆರ್ಭಟ ಮುಂದುವರಿದಿದ್ದು, ಸೋಂಕು ಪ್ರಕರಣಗಳ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಮಹಾರಾಷ್ಟ್ರದಲ್ಲೇ ಅತಿ ಹೆಚ್ಚು ಓಮಿಕ್ರಾನ್‌ ಪ್ರಕರಣಗಳು ದೃಢಪಟ್ಟಿವೆ.

ದೇಶದ 23 ರಾಜ್ಯಗಳಲ್ಲಿ ಈವರೆಗೆ ಒಟ್ಟು 1,270 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 450 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಒಟ್ಟು 125 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಕೋವಿಡ್‌ ಲಸಿಕೆಯ 4ನೇ ಬೂಸ್ಟರ್‌ ಡೋಸ್‌ಗೆ ಇಸ್ರೇಲ್‌ ಅನುಮೋದನೆ

OMICRON 3

ದೆಹಲಿಯಲ್ಲಿ 320 ಪ್ರಕರಣಗಳು ದೃಢಪಟ್ಟಿದ್ದು, 57 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಜರಾತ್‌ನಲ್ಲಿ 97, ರಾಜಸ್ತಾನ್‌ನಲ್ಲಿ 69 ಹಾಗೂ ದಕ್ಷಿಣ ಭಾರತದ ಕೇರಳದಲ್ಲಿ 109, ತೆಲಂಗಾಣದಲ್ಲಿ 62, ಆಂಧ್ರಪ್ರದೇಶದಲ್ಲಿ 16, ತಮಿಳುನಾಡಿನಲ್ಲಿ 46, ಕರ್ನಾಟಕದಲ್ಲಿ 34 ಓಮಿಕ್ರಾನ್‌ ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ನವೆಂಬರ್‌ನಲ್ಲಿ ಓಮಿಕ್ರಾನ್‌ ಪತ್ತೆಯಾಯಿತು. ಈವರೆಗೆ 374 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇದನ್ನೂ ಓದಿ: ಮಾಜಿ ಸೈನಿಕರನ್ನು ಹತ್ಯೆಗೈದ ತಾಲಿಬಾನಿಗಳ ವಿರುದ್ಧ ಅಫ್ಘಾನ್ ಮಹಿಳೆಯರ ಪ್ರತಿಭಟನೆ

Bangalore international airport

ಅಷ್ಟೇ ಅಲ್ಲದೇ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ದಿನೇ ದಿನೆ ಏರುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 16,764 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಮತ್ತೆ ಆತಂಕ ಮೂಡಿಸಿದೆ.

Share This Article
Leave a Comment

Leave a Reply

Your email address will not be published. Required fields are marked *