ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ಸೋಂಕು ಭೀತಿ ಹೆಚ್ಚಾಗಿದೆ. ಪರಿಣಾಮವಾಗಿ ಈ ವರ್ಷ ಬಂಡೀಪುರ ಅರಣ್ಯ ಧಾಮದಲ್ಲಿ ಹೊಸ ವರ್ಷಾಚರಣೆಯನ್ನು ನಿಷೇಧಿಸಲಾಗಿದೆ.
ಡಿಸೆಂಬರ್ 31 ಹಾಗೂ ಜನವರಿ 1ರಂದು ಬಂಡೀಪುರದಲ್ಲಿ ಹೊಸವರ್ಷಾಚರಣೆಯನ್ನು ಪ್ರತಿ ವರ್ಷ ಅದ್ದೂರಿಯಾಗಿ ನಡೆಸಲಾಗುತ್ತದೆ. ಆದರೆ ಸದ್ಯ ಕೊರೊನಾ ಸೋಂಕಿನ ಭೀತಿ ಹೆಚ್ಚಿರುವುದರಿಂದ ಹೊಸ ವರ್ಷ ಸಂಭ್ರಮಾಚರಣೆಗೆ ಅಧಿಕಾರಿಗಳು ನಿಷೇಧ ಹೇರಿದ್ದಾರೆ. ಇದನ್ನೂ ಓದಿ: 5 ದಿನಗಳ ಕಾಲ ದುಬೈ ಪ್ರವಾಸ ಹೊರಟ ಬಿಎಸ್‍ವೈ
Advertisement
Advertisement
ಡಿಸೆಂಬರ್ 31 ಹಾಗೂ ಜನವರಿ 1 ರಂದು ಅರಣ್ಯ ಇಲಾಖೆಯ ಡಾರ್ಮೆಟರಿಗಳು, ಕಾಟೇಜ್ ಹಾಗೂ ಗೆಸ್ಟ್ ಹೌಸ್‌ಗಳಲ್ಲಿ ವಾಸ್ತವ್ಯ ನಿರ್ಬಂಧಿಸಿದ್ದು, ಆನ್‌ಲೈನ್ ಬುಕಿಂಗ್ ಕೂಡಾ ಬ್ಲಾಕ್ ಮಾಡಲಾಗಿದೆ.
Advertisement
ಹೊಸ ವರ್ಷದ ಸಲುವಾಗಿ ಬಂಡೀಪುರದಲ್ಲಿ ಕೇವಲ ಮೋಜು-ಮಸ್ತಿಗಷ್ಟೇ ಬ್ರೇಕ್ ಹಾಕಲಾಗಿದೆ. ಎಂದಿನಂತೆ ಬೆಳಗ್ಗೆ ಹಾಗೂ ಸಂಜೆ ಸಫಾರಿ ಇರಲಿದೆ. ಆದರೆ ವಾಸ್ತವ್ಯ ಹೂಡುವಂತಿಲ್ಲ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ನಟೇಶ್ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ ಮುಂದೂಡಿ, ರ‍್ಯಾಲಿ-ಸಮಾರಂಭ ನಿಲ್ಲಿಸಿ: ಚುನಾವಣಾ ಆಯೋಗ, ಕೇಂದ್ರಕ್ಕೆ ಕೋರ್ಟ್ ಒತ್ತಾಯ