ಮೈಸೂರು: ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್‍ನ ಹೊಸ ರೂಪಾಂತರಿ ಓಮಿಕ್ರಾನ್ ಮೈಸೂರಿಗೂ ಕಾಲಿಟ್ಟಿದ್ದು, ವಿದೇಶದಿಂದ ಬಂದಿದ್ದ ಬಾಲಕಿಯಲ್ಲಿ ಪತ್ತೆಯಾಗಿದೆ.
Advertisement
ಕೊರೊನಾದಿಂದ ತತ್ತರಿಸಿದ್ದ ಮೈಸೂರು ಈಗತಾನೇ ಚೇತರಿಸಿಕೊಳ್ಳುತ್ತಿದೆ. ಆದರೆ ಈಗ ಅರಮನೆ ನಗರಿಯಲ್ಲಿ ಓಮಿಕ್ರಾನ್ ಆತಂಕ ಶುರುವಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಓಮಿಕ್ರಾನ್ ದೃಢವಾಗಿತ್ತು. ಬಾಲಕಿಯು ಸ್ವಿಜರ್ಲೆಂಡ್‍ನಿಂದ ಮೈಸೂರಿಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಪಾಸಿಟಿವ್ ಬಂದಿದ್ದರಿಂದ, ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್‍ಗೆ ಕಳುಹಿಸಲಾಗಿತ್ತು. ಬಾಲಕಿಗೆ ಓಮಿಕ್ರಾನ್ ಇರುವುದು ಪತ್ತೆಯಾಗಿದೆ. ಇದನ್ನೂ ಓದಿ: ಹೈಡ್ರಾಮಾ ಮಾಡುತ್ತಿದ್ದ ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡಿದ ಆಶಾ ಕಾರ್ಯಕರ್ತೆಯರು
Advertisement
Advertisement
ಸದ್ಯಕ್ಕೆ ಬಾಲಕಿಗೆ ಸೋಂಕಿನ ಯಾವುದೇ ರೋಗಲಕ್ಷಣ ಕಂಡುಬಂದಿಲ್ಲ. ಬಾಲಕಿಯನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ತಪಾಸಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಬೊಮ್ಮಾಯಿ ನಾಯಕತ್ವದಲ್ಲೇ 2023ರ ಚುನಾವಣೆ: ವಿ.ಸೋಮಣ್ಣ