ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಲು ಮುಂದಾಗಿದೆ. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಮಿತಿಗೊಳಿಸಿ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
Advertisement
ರಾಜ್ಯದಲ್ಲಿ ಓಮಿಕ್ರಾನ್ ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಸರ್ಕಾರ ತುರ್ತು ಸಭೆ ನಡೆಸಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಜರುಗಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಓಮಿಕ್ರಾನ್ ನಿಯಂತ್ರಿಸುವ ಉದ್ದೇಶದಿಂದ ಹಲವು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಯಾವುದೇ ಸಮಾರಂಭಗಳಲ್ಲಿ ಹೆಚ್ಚು ಜನರು ಪಾಲ್ಗೊಳ್ಳುವುದರಿಂದ ಸೋಂಕು ವೇಗವಾಗಿ ಹರಡುವ ಭೀತಿ ಇದೆ. ಅದನ್ನು ಈಗಿನಿಂದಲೇ ತಪ್ಪಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಪೋಷಕರು 2 ಡೋಸ್ ಲಸಿಕೆ ಪಡೆಯದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ: ಅಶೋಕ್
Advertisement
Advertisement
ಮೊಟ್ಟ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಈಗ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಎರಡು ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರಿಬ್ಬರೂ ಬೆಂಗಳೂರಿನವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹಲವು ಮುಂಜಾಗ್ರತೆ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ 16 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ ಎಂಬ ಮಾಹಿತಿ ಇದೆ: ಹೆಚ್.ಕೆ.ಪಾಟೀಲ್