KarnatakaLatestLeading NewsMain Post

ಓಮಿಕ್ರಾನ್ ಬಗ್ಗೆ ನಾಳೆ ಸಿಎಂ ನೇತೃತ್ವದಲ್ಲಿ ಸಭೆ – ನೈಟ್ ಕರ್ಫ್ಯೂ ಜಾರಿ?

Advertisements

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

night curfew

ನಾಳಿನ ಸಭೆಯಲ್ಲಿ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ನೈಟ್ ಕರ್ಫ್ಯೂ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಜೊತೆಗೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಕ್ತ ಕ್ರಮಕೈಗೊಳ್ಳುವ ಚಿಂತನೆಯನ್ನೂ ಸರ್ಕಾರ ನಡೆಸಿದೆ. ಪ್ರಕರಣಗಳ ಸಂಖ್ಯೆ ಏರುತ್ತಿರುವುದಕ್ಕೆ ಸಿಎಂ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೋದಿ ಫೋಬಿಯಾ ಎನ್ನುವಂತೆ ಕಾಂಗ್ರೆಸ್‍ನವರು ನಡೆದುಕೊಳ್ಳುತ್ತಿದ್ದಾರೆ: ಪ್ರಹ್ಲಾದ್ ಜೋಶಿ

ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಏರುತ್ತಿದೆ. ಈವರೆಗೆ 31 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಅತಿಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕಾರ್ನಾಟಕ 7ನೇ ಸ್ಥಾನದಲ್ಲಿದೆ.

ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಈಗಾಗಲೇ ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದೇ ಕ್ರಮವನ್ನು ರಾಜ್ಯದಲ್ಲೂ ಮತ್ತೆ ಜಾರಿಗೊಳಿಸುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್

Leave a Reply

Your email address will not be published.

Back to top button