ಮಡಿಕೇರಿ: ಕರ್ನಾಟಕಕ್ಕೆ ಓಮಿಕ್ರಾನ್ ಸೋಂಕು ಕಾಲಿಟ್ಟಿದ್ದು, ಕೋವಿಡ್ ಮೂರನೇ ಅಲೆ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇದೀಗಾ ಕೊಡಗು ಜಿಲ್ಲಾಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಬೆಡ್‌ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
Advertisement
ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯಿಂದ ಬೆಡ್‌ಗಳ ಸಿದ್ಧತೆ ನಡೆಯುತ್ತಿದೆ. ಮಡಿಕೇರಿ ನಗರದ ಮೆಡಿಕಲ್ ಕಾಲೇಜಿನಲ್ಲಿ 200 ಬೆಡ್‌ಗಳ ವ್ಯವಸ್ಥೆಯನ್ನು ವೈದ್ಯಕೀಯ ಸಿಬ್ಬಂದಿ ಮಾಡಿಕೊಂಡಿದ್ದಾರೆ. ಮೆಡಿಕಲ್ ಕಾಲೇಜಿಗೆ ಡಿಎಚ್‍ಓ ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಲಸಿಕೆ ಪ್ರಮಾಣ ಪತ್ರ ಎಡವಟ್ಟು – ವ್ಯಾಕ್ಸಿನ್ ಪಡೆಯಲು ಬಂದಾತನಿಗೆ ಶಾಕ್
Advertisement
ಆಕ್ಸಿಜನ್ ಉತ್ಪಾದನಾ ಘಟಕಗಳ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜು ಮತ್ತು ಪ್ರತೀ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಸಿದ್ಧವಾಗಿದ್ದು, ಸರ್ಕಾರದ ಸೂಚನೆಯಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 560 ಬೆಡ್‌ಗಳನ್ನು ರೆಡಿ ಮಾಡಲಾಗುತ್ತಿದೆ. ಎಲ್ಲಾ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಅಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಓಮಿಕ್ರಾನ್ ಬಗ್ಗೆ ಆತಂಕ ಬೇಡ- ಸೋಂಕಿತನ ಅಭಯ
Advertisement
Advertisement
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿಲ್ಲ. ಆದರೂ ಈಗಾಗಲೇ ಅಗತ್ಯ ಔಷಧ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ. ಜನರು ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಳ್ಳುವಂತೆ ಡಿಎಚ್‌ಒ ಸಲಹೆ ನೀಡಿದರು.