ನವದೆಹಲಿ: ಓಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆಯನ್ನು ದೆಹಲಿ ಸರ್ಕಾರ ನಿಗದಿಪಡಿಸಿದೆ.
Advertisement
ಓಮಿಕ್ರಾನ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸೋಂಕಿತ ರೋಗಿಗಳನ್ನು ಪ್ರತ್ಯೇಕಿಸಲು ಮತ್ತು ಚಿಕಿತ್ಸೆ ನೀಡಲು ದೆಹಲಿ ಸರ್ಕಾರ ಈಗಾಗಲೇ ಪ್ರತೇಕ ವಾರ್ಡ್‍ಗಳನ್ನು ನಿಗದಿಪಡಿಸಲು ಆಸ್ಪತ್ರೆಗೆ ಸೂಚಿಸಲಾಗಿದೆ.
Advertisement
Advertisement
ಹೊಸ ರೂಪಾಂತರಿ ವೈರಸ್ ತಗುಲಿದ ಯಾವುದೇ ರೋಗಿಗೆ ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸಲಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಹೊಸ ರೂಪಾಂತರಿ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ತೀವ್ರ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಭಾನುವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದನ್ನೂ ಓದಿ: ಕೇಂದ್ರ ತೆಗೆದುಕೊಳ್ಳೋ ತೀರ್ಮಾನದ ಮೇಲೆ ಬೂಸ್ಟರ್ ಡೋಸ್ ನೀಡೋ ಬಗ್ಗೆ ತೀರ್ಮಾನ: ಸುಧಾಕರ್
Advertisement
ಮಾರ್ಗಸೂಚಿಗಳ ಪ್ರಕಾರ, ಓಮಿಕ್ರಾನ್ ಪಾಸಿಟಿವ್ ದೃಢಪಡುವ ರೋಗಿಗಳಿಗೆ ಪ್ರತ್ಯೇಕ ಘಟಕವನ್ನು ಸ್ಥಾಪಿಸಬೇಕು ಎಂದು ಹೇಳಿದೆ. ಅದರ ಪ್ರಕಾರ ದೆಹಲಿ ಸರ್ಕಾರ ಲೋಕನಾಯಕ ಆಸ್ಪತ್ರೆಯನ್ನು ಹೊಸ ರೂಪಾಂತರಿ ಸೋಂಕಿತರಿಗಾಗಿ ನಿಗದಿಪಡಿಸಲಾಗಿದೆ. ದೇಶಗಳಿಂದ ಬರುವ ಎಲ್ಲಾ ಜನರಿಗೆ ಆರ್‍ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯ ಮತ್ತು ಪ್ರತ್ಯೇಕವಾಗಿ ಕ್ವಾರಂಟೈನ್ ಆಗುವಂತೆ ಆದೇಶಿಸಿದ್ದಾರೆ. ಇದನ್ನೂ ಓದಿ: ಗುರುದ್ವಾರದಲ್ಲಿ ಫೋಟೋಶೂಟ್ – ಮಾಡೆಲ್ ವಿರುದ್ಧ ನೆಟ್ಟಿಗರು ಗರಂ