ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ ಪ್ರಯಾಣಿಕರಿಗೆ ಪಾಸಿಟಿವ್ ಬಂದಿದೆ.
ಇಂದು ಬೆಳಗ್ಗಿನ ಜಾವ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 9 ಮಂದಿಯಲ್ಲಿ ಸೋಂಕು ಕಾಣಿಸಿದೆ. ಇಂಗ್ಲೆಂಡ್ 5, ಅಮೆರಿಕ 2, ಘಾನಾ 1, ಸ್ಕಾಟ್‌ಲ್ಯಾಂಡ್‌ನಿಂದ ಬಂದ ಒಬ್ಬರಿಗೆ ಕೊರೊನಾ ಬಂದಿದೆ. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತ ಹೃದಯಾಘಾತದಿಂದ ಸಾವು
Advertisement
Advertisement
ಎಲ್ಲರ ಗಂಟಲ ದ್ರವದ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಕಳುಹಿಸಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ಮೂಲಗಳು ತಿಳಿಸಿವೆ.
Advertisement
ಬಿಬಿಎಂಪಿ ವ್ಯಾಪ್ತಿಯಲ್ಲಿ 20 ರಿಂದ 50 ವರ್ಷದೊಳಗಿರುವವರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಬಾಧಿತರಾಗುತ್ತಿದ್ದಾರೆ. ವಿದೇಶಗಳಿಂದ ಬರುತ್ತಿರುವ ಪ್ರಯಾಣಿಕರ ಪೈಕಿ ಹೆಚ್ಚಿನ ಮಂದಿಯಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇದನ್ನೂ ಓದಿ: ಕೋವಿಡ್ ಲಸಿಕೆಯ 4ನೇ ಬೂಸ್ಟರ್ ಡೋಸ್‌ಗೆ ಇಸ್ರೇಲ್ ಅನುಮೋದನೆ
Advertisement
ಗುರುವಾರ ಕರ್ನಾಟಕದಲ್ಲಿ 566 ಹೊಸ ಪ್ರಕರಣ ಪತ್ತೆಯಾಗಿತ್ತು. ಜೊತೆಗೆ ಓಮಿಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿತ್ತು.