ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 64 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಹಾಗಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಠಿಣ ನಿಯಮ ಜಾರಿಗೆ ಮುಂದಾಗಿದ್ದಾರೆ.
Advertisement
ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡಂತೆ ಇಂದು ಉನ್ನತ ಮಟ್ಟದ ಸಭೆ ಕರೆದ ಕೇಜ್ರಿವಾಲ್, ಓಮಿಕ್ರಾನ್ ತಡೆಗೆ ಬೇಕಾಗುವ ಎಲ್ಲಾ ಸಿದ್ಧತೆಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಪ್ರತಿದಿನ 3 ಲಕ್ಷಕ್ಕೂ ಮೇಲ್ಪಟ್ಟು ಕೊರೊನಾ ಟೆಸ್ಟ್ ನಡೆಸಲು ಸೂಚಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಓಮಿಕ್ರಾನ್ ಸ್ಫೋಟ – ಇಂದು ಒಂದೇ ದಿನ 12 ಪ್ರಕರಣ ದೃಢ
Advertisement
Delhi | CM Arvind Kejriwal holds a high-level meeting as Delhi reports 64 Omicron cases (as per Ministry of Health and Family Welfare) and to strengthen home isolation managment for COVID19 patients pic.twitter.com/9hjAxgT5jc
— ANI (@ANI) December 23, 2021
Advertisement
ಕೊರೊನಾ ಕೇಸ್‍ಗೆ ಸಂಬಂಧಿಸಿದಂತೆ ಸೋಂಕಿತ ವ್ಯಕ್ತಿ ಆಸ್ಪತ್ರೆಗೆ ದಾಖಲಾದರೆ ಆತನಿಗೆ ಚಿಕಿತ್ಸೆಗೆ ಬೇಕಾಗುವ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು. ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡರೆ ಹೋಂ ಐಸೋಲೇಶನ್ ಮಾಡಿ ಚಿಕಿತ್ಸೆ ನೀಡಬೇಕು. ಎಲ್ಲಾ ಆಸ್ಪತ್ರೆಗಳಿಗೆ ಬೆಡ್, ಆಕ್ಸಿಜನ್ ಟ್ಯಾಂಕರ್, ಔಷಧಿಗಳನ್ನು ತಕ್ಷಣ ಬೇಕಾದಷ್ಟು ವ್ಯವಸ್ಥೆ ಮಾಡುವಂತೆ ಸಿಎಂ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ಪತ್ತೆ – 9 ವರ್ಷದ ಬಾಲಕಿಗೆ ಸೋಂಕು
Advertisement
ನಿರ್ಬಂಧ ಏನೇನು?
ದೆಹಲಿಯಲ್ಲಿ ಧಾರ್ಮಿಕ, ರಾಜಕೀಯ, ಸಾಂಸ್ಕೃತಿಕ, ಕ್ರೀಡೆ, ಸಭೆ ಸಮಾರಂಭ, ಹಬ್ಬ ಆಚರಣೆಗೆ ನಿಷೇಧ ಹೇರಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಶೇ.50 ರಷ್ಟು ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಮದುವೆ ಸಹಿತ ಇತರ ಕಾರ್ಯಕ್ರಮಗಳಿಗೆ ಗರಿಷ್ಠ 200 ಜನರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.