ನವದೆಹಲಿ: ಕೊರೊನಾ ವೈರಸ್ ರೂಪಾಂತರ ತಳಿ ಓಮಿಕ್ರಾನ್ ಭೀತಿಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
Advertisement
ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕೊರೊನಾ ನಿಯಂತ್ರಿಸುವ ಸಲುವಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಸೋಮವಾರದಿಂದ (ಡಿಸೆಂಬರ್ 27) ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂಗೊಳಿಸಲು ಆದೇಶಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂಗೆ ಚಿಂತನೆ
Advertisement
Delhi Govt had planned a grand show on the life of Babasaheb Ambedkar from 5th January, in Jawaharlal Nehru Stadium. However, this show is being postponed in light of rising Covid cases. We shall announce a new date as soon as the situation improves.
— Arvind Kejriwal (@ArvindKejriwal) December 26, 2021
Advertisement
ಜನವರಿ 5 ರಿಂದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಅದ್ಧೂರಿ ಕಾರ್ಯಕ್ರಮವನ್ನು ದೆಹಲಿ ಸರ್ಕಾರ ಆಯೋಜಿಸಿತ್ತು. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಪರಿಸ್ಥಿತಿ ಸುಧಾರಿಸಿದ ನಂತರ ಹೊಸ ದಿನಾಂಕವನ್ನು ಘೋಷಿಸುತ್ತೇವೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.