ತಿರುವನಂತಪುರಂ: ಪಾಕಿಸ್ತಾನ ಸೇನೆ ವಶದಲ್ಲಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಶುಕ್ರವಾರ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಇದಕ್ಕೆ ಕಾಂಗ್ರೆಸ್‍ನ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಕಾರಣ ಎಂದು ಕೇರಳ ಮಾಜಿ ಸಿಎಂ ಒಮ್ಮನ್ ಚಾಂಡಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ ಶ್ರಮಪಟ್ಟು ಪಾಕಿಸ್ತಾನದಿಂದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನ ಭಾರತಕ್ಕೆ ವಾಪಾಸ್ ಕರೆಸಿಕೊಂಡಿದೆ. ಆದರೆ ಕೇರಳ ಸಿಎಂ ಮಾತ್ರ ಅಭಿನಂದನ್ ಬಿಡುಗಡೆಯಾಗಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮತ್ತು ಕಾಂಗ್ರೆಸ್‍ನ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಕಾರಣ ಎಂದು ಟ್ವೀಟ್ ಮಾಡಿದ್ದು, ಈ ಟ್ವೀಟ್ ರಾಜಕೀಯ ಪಾಳಯದಲ್ಲಿ ಬಿರುಗಾಳಿ ಎಬ್ಬಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ.
Advertisement
https://twitter.com/Oommen_Chandy/status/1101461843170680832
Advertisement
ಟ್ವೀಟ್‍ನಲ್ಲಿ ಏನಿದೆ?
#WelcomeHomeAbhinandan, ನವಜೋತ್ ಸಿಂಗ್ ಸಿಧು ಅವರ ಶ್ರಮ ಹಾಗೂ ಇಮ್ರಾನ್ ಖಾನ್ ಅವರ ಬೆಂಬಲಕ್ಕೆ ಧನ್ಯವಾದ. ಈ ನಡೆ ಒಳ್ಳೆಯದು ಇದರಿಂದ ಎರಡು ರಾಷ್ಟ್ರಗಳ ಗಡಿಯಲ್ಲಿ ಶಾಂತಿ ನೆಲೆಸುತ್ತದೆ ಎಂದು ಭಾವಿಸಿದ್ದೇನೆ ಎಂದು ಸಿಧು ಹಾಗೂ ಪಾಕ್ ಸಿಎಂ ಅವರನ್ನ ಟ್ಯಾಗ್ ಮಾಡಿ ಒಮ್ಮನ್ ಚಾಂಡಿ ಟ್ವೀಟ್ ಮಾಡಿದ್ದಾರೆ.
Advertisement
ಒಮ್ಮನ್ ಚಾಂಡಿ ಅವರು ಮಾಡಿರುವ ಟ್ವೀಟ್ ಅನ್ನು ರೀಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಅವರು ಕೂಡ ಈ ಮಾತನ್ನು ಒಪ್ಪಿದ್ದಾರೆ.
Advertisement
Humbled Sir, my courage has multiplied manifold…
Your words give me the strength to walk the path of truth fearlessly and inspire me never to compromise with moral values! @Oommen_Chandy ????????
उसूलों पर आंच आए तो टकराना जरूरी है,
जिंदा हो तो जिंदा नजर आना जरूरी है| https://t.co/XoRkGNE1VD
— Navjot Singh Sidhu (@sherryontopp) March 1, 2019
ಅಲ್ಲದೆ ಒಮ್ಮನ್ ಚಾಂಡಿ ಅವರ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ನವಜೋತ್ ಸಿಂಗ್ ಸಿಧು ಅವರು, ನಿಮ್ಮ ಮಾತುಗಳು ನನಗೆ ಸತ್ಯದ ದಾರಿಯಲ್ಲಿ ನಡೆಯಲು ಶಕ್ತಿ ಮತ್ತು ಧೈರ್ಯವನ್ನು ನೀಡಿವೆ, ನಾನು ನನ್ನ ಆದರ್ಶದೊಂದಿಗೆ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ. ನೈತಿಕ ಮೌಲ್ಯಗಳನ್ನು ಮರೆಯುವುದಿಲ್ಲ ಎಂದು ರೀ-ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv