ದಾವಣಗೆರೆ: ಜಿಲ್ಲೆಯ ಆನಗೋಡು ರಾಷ್ಟ್ರೀಯ ಹೆದ್ದಾರಿ ಬಳಿ ಒಕ್ಕಣಿಗೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಓಮ್ನಿ
ಕಾರು ಬರುತ್ತಿದ್ದಂತೆ, ಬೆಂಕಿ ಹೊತ್ತಿ ಧಗಧಗನೆ ಉರಿದು ಸುಟ್ಟು ಭಸ್ಮವಾಗಿದೆ.
ಫಜಲ್ ಅಹಮ್ಮದ್ ಎಂಬವರಿಗೆ ಸೇರಿದ ಕಾರಾಗಿದೆ. ಅಂಗಡಿಗೆ ದಿನಸಿ ಸಾಮನುಗಳನ್ನ ಒಯ್ಯುವಾಗ ಹೊತ್ತಿ ಉರಿದಿದೆ. ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತಿದ್ದಂತೆ ಚಾಲಕ ಹೊರ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಬರುವಷ್ಟರಲ್ಲೆ ಓಮ್ನಿ ಕಾರು ಸಂಪೂರ್ಣ ಭಸ್ಮವಾಗಿದೆ. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ
ಬೆಂಕಿ ಹೊತ್ತಿ ಉರಿಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಾವಣಗೆರೆ ರೂರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನೂತನ ದಾಖಲೆ ಬರೆದ ಭಾರತ ಮೂಲದ ಹರ್‌ಪ್ರೀತ್ ಚಂಡಿ